ನವೆಂಬರ್ನಲ್ಲಿ ಸಾಹಿತ್ಯ ಸಮ್ಮೇಳನ
ಕ.ಪ್ರ. ವಾರ್ತೆ ಯಾದಗಿರಿ ಜು.19
ಯಾದಗಿರಿ: ಜಿಲ್ಲಾ ಕನ್ನಡ ಸಾಹಿತ್ಯ ಸಾಹಿತ್ಯ ಷರಿಷತ್ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ನವೆಂಬರ್ನಲ್ಲಿ ಪ್ರಥಮ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ತಿಳಿಸಿದರು.
ಕನ್ನಡದ ಚಟುವಟಿಕೆಗಳು: ನಗರದ ಕಸಾಪ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಕಸಾಪ ಕಾರ್ಯಕಾರಿಣಿ ಸಭೆ ಅಧ್ಯಕ್ಷತೆ ವಹಿಸಿ, ಈ ವಿಷಯ ಪ್ರಸ್ತಾಪಿಸಿದರು. ಯಾದಗಿರಿ ಜಿಲ್ಲೆಯಾದ ನಂತರ ಮೊದಲ ಬಾರಿಗೆ ಈ ಸಮ್ಮೇಳನವನ್ನು ಆಯೋಜಿಸುತ್ತಿದ್ದು, ಅತ್ಯಂತ ಸಂಭ್ರಮದ ಸಂಗತಿಯಾಗಿದೆ. ಆದ್ದರಿಂದ ಸಮ್ಮೇಳನವನ್ನು ಅದ್ಧೂರಿಯಾಗಿ ಆಯೋಜಿಸುವ ನಿರ್ಧಾರ ಹೊಂದಲಾಗಿದೆ.
ಮೊದಲೇ ಸಾಹಿತ್ಯ ಸಮ್ಮೇಳನ ಆಯೋಜಿಸುವ ಉದ್ದೇಶ ಹೊಂದಿದ್ದರೂ, ಸಮಯದ ಅಭಾವ ಹಾಗೂ ಚುನಾವಣೆಗಳ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಇದುವರೆಗೂ ಸಮ್ಮೇಳನ ಆಯೋಜಿಸುವ ಕುರಿತು ಪ್ರಸ್ತಾಪಿಸಿರಲಿಲ್ಲ. ನವೆಂಬರ್ನಲ್ಲಿ ನಾಡಿನಾದ್ಯಂತ ಕನ್ನಡದ ಚಟುವಟಿಕೆಗಳು ಹೆಚ್ಚಾಗಿ ನಡೆಯಲಿದ್ದು, ಆಗಲೇ ಜಿಲ್ಲಾ ಸಮ್ಮೇಳನವನ್ನು ಆಯೋಜಿಸುವುದರ ಮೂಲಕ ಸಮ್ಮೇಳನವನ್ನು ಅಭೂತಪೂರ್ವವಾಗಿ ಆಯೋಜಿಸುವ ಗುರಿಯನ್ನು ಜಿಲ್ಲಾ ಕಸಾಪ ಹೊಂದಿದೆ ಎಂದರು.
ಯಶಸ್ವಿಗೊಳಿಸಲು ಯೋಜನೆ: ಡಿಸೆಂಬರ್, ಜನವರಿಯಲ್ಲಿ ಜಿಲ್ಲೆಯ ಶಹಾಪುರ ಹಾಗೂ ಸುರಪುರ ತಾಲೂಕುಗಳಲ್ಲಿಯೂ ಸಹ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸಬೇಕೆಂದು ತಾಲೂಕು ಅಧ್ಯಕ್ಷರುಗಳಿಗೆ ತಿಳಿಸಿದರು. ಚೊಚ್ಚಲ ಜಿಲ್ಲಾ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಪೂರಕವಾಗಿ ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಕಸಾಪದ ಎಲ್ಲಾ ಪದಾಧಿಕಾರಿಗಳಿಗೆ ಅವರು ಸೂಚಿಸಿದರು.
ಜಿಲ್ಲಾ ಕೇಂದ್ರ ಹಾಗೂ ನವೆಂಬರ್ನಲ್ಲಿ ಸಮ್ಮೇಳನ ಆಯೋಜಿಸುವ ಜಿಲ್ಲಾಧ್ಯಕ್ಷರ ಹೇಳಿಕೆಗೆ ಕಾರ್ಯಕಾರಿ ಮಂಡಳಿ ಸಂಪೂರ್ಣ ಒಪ್ಪಿಗೆ ನೀಡಿತು. ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಡಾ.ಸುಭಾಶ್ಚಂದ್ರ ಕೌಲಿಗಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಕಾರ್ಯದರ್ಶಿ ಪ್ರಕಾಶ ಅಂಗಡಿ ನಿರೂಪಿಸಿದರು. ಕೋಶಾಧ್ಯಕ್ಷ ಬಸವರಾಜ ಮೋಟ್ನಳ್ಳಿ ಸ್ವಾಗತಿಸಿದರು. ದೇವರಾಜ ವರ್ಕನಳ್ಳಿ ವಂದಿಸಿದರು.
ಶಹಾಪುರ ತಾಲೂಕು ಕಸಾಪ ಅಧ್ಯಕ್ಷ ಸಿದ್ಲಿಂಗಣ್ಣ ಆನೆಗುಂದಿ, ಸುರಪುರ ತಾಲೂಕು ಅಧ್ಯಕ್ಷ ಶಾಂತಪ್ಪ ಬೂದಿಹಾಳ, ಯಾದಗಿರಿ ಅಧ್ಯಕ್ಷ ಶ್ರೀನಿವಾಸ ಕರ್ಲಿ, ಪದಾಧಿಕಾರಿಗಳಾದ ಅಯ್ಯಣ್ಣ ಹುಂಡೇಕಾರ್, ವಿ.ಸಿ.ರೆಡ್ಡಿ, ಬಸವಂತರಾಯಗೌಡ ಮಾಲೀಪಾಟೀಲ್, ಆರ್. ಮಹಾದೇವಪ್ಪ ಅಬ್ಬೆತುಮಕೂರು, ಲಿಂಗಣ್ಣ ಪಡಿಶೆಟ್ಟಿ, ನೂರಂದಪ್ಪ ಲೇವಡಿ, ಚನ್ನಪ್ಪ ಕೋರಿಶೆಟ್ಟಿ, ಭಾಗ್ಯವತಿ ಕೆಂಭಾವಿ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

