ಗುಲ್ಬರ್ಗಾ

ತೇಲ್ಕೂರು ಬಿಜೆಪಿ ಜಿಲ್ಲಾಧ್ಯಕ್ಷ, ಶಾಬಾದಿ ನಗರಾಧ್ಯಕ್ಷ

Published On :

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜು.20
ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಶನಿವಾರ ಸಂಜೆ ನಡೆದ ಬಿಜೆಪಿ ನಗರ ಮತ್ತು ಜಿಲ್ಲಾ ಗ್ರಾಮಾಂತರ ಸಭೆಯಲ್ಲಿ ವಿದ್ಯಾಸಾಗರ ಶಾಬಾದಿ ನಗರ ಅಧ್ಯಕ್ಷರಾಗಿ ಮತ್ತು ಜಿಲ್ಲಾ ಗ್ರಾಮಾಂತರ ಅಧ್ಯಕ್ಷರಾಗಿ ರಾಜಕುಮಾರ್ ಪಾಟೀಲ್ ತೇಲ್ಕೂರ್ ಪುನರಾಯ್ಕೆಗೊಂಡರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಎಂಎಲ್ಸಿ ರಘುನಾಥರಾವ ಮಲ್ಕಾಪುರೆ ಅವರು ಅಧ್ಯಕ್ಷರ ಆಯ್ಕೆಗೆ ಸೂಚನೆ ನೀಡಿದರೆ, ಮಾಜಿ ಸಿಎಂ ಹಾಗೂ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಸದಾನಂದಗೌಡರು ಶಾಬಾದಿ ಮತ್ತು ತೇಲ್ಕೂರ್ ಪುನರಾಯ್ಕೆ ಘೋಷಣೆ ಮಾಡಿದರು.
ಈ ವೇಳೆ ಮಾತನಾಡಿದ ಸದಾನಂದಗೌಡರು, ಪಕ್ಷವನ್ನು ಬೇರು ಮಟ್ಟದಿಂದ ಸಂಘಟಿಸಲು ಪ್ರತಿ ಮೂರು ವರ್ಷಕ್ಕೊಮ್ಮೆ ರಾಷ್ಟ್ರ ಮತ್ತು ರಾಜ್ಯ ಮಟ್ಟದಿಂದ ಪ್ರತಿ ಮಂಡಲದವರೆಗೂ ಸಂಘಟನೆ ಪರ್ವ ನಡೆಸಿ ನೂತನವಾಗಿ ಎಲ್ಲ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದೆ. ಈ ಭಾರಿ ವಿಧಾನಸಭೆ ಚುನಾವಣೆ ನಡೆದಿರುವ ಹಿನ್ನೆಲೆಯಲ್ಲಿ 3 ತಿಂಗಳದ ನಂತರ ಈ ಸಂಘಟನೆ ಪರ್ವ ಆರಂಭಿಸಲಾಗಿದೆ ಎಂದರು.
ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖ ಆಕಾಂಕ್ಷಿಯಾಗಿದ್ದ ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮತ್ತು ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ತಳವಾರ ಮತ್ತು ಜಿಪಂ ಮಾಜಿ ಅಧ್ಯಕ್ಷ ಶಿವಪ್ರಭು ಪಾಟೀಲ್ ಮಾತನಾಡಿ, ಪಕ್ಷದ ನಿರ್ಣಯಕ್ಕೆ ಬದ್ಧರಾಗಿ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದರು.
ಸಭೆಯಲ್ಲಿ ಮಾಜಿ ಸಚಿವ ರೇವು ನಾಯಕ ಬೆಳಮಗಿ, ಶಾಸಕರಾದ ದತ್ತಾತ್ರೇಯ ಪಾಟೀಲ್ ರೇವೂರ, ಪ್ರಭು ಚವ್ಹಾಣ, ಬಿ.ಜಿ. ಪಾಟೀಲ್, ವಿದ್ಯಾಸಾಗರ ಕುಲಕರ್ಣಿ, ಮುಕುಂದ ದೇಶಪಾಂಡೆ, ರಮೇಶ ಯಾಕಾಪುರ, ಮಹಾಂತಗೌಡ ಪಾಟೀಲ್, ಶರಣಪ್ಪ ಪಾಟೀಲ್ ತೇಲ್ಕೂರ್, ರಾಜಗೋಪಾಲ ರೆಡ್ಡಿ, ಅವಿಕಾಶ ಕುಲಕರ್ಣಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.