ಗುಲ್ಬರ್ಗಾ

ಇಂದು ದಸಂಸ ಪ್ರತಿಭಟನೆ

Published On :

ಗುಲ್ಬರ್ಗ: ಬಿಹಾರದ ಬೋಧಗಯಾದಲ್ಲಿ ಇತ್ತೀಚೆಗೆ ಬಾಂಬ್ ಸ್ಫೋಟ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಸೂಕ್ತ ಕ್ರಮ ಜರುಗಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಘಟಕ ಜು.23ರಂದು ನಗರದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ. ಮಧ್ಯಾಹ್ನ 12ಕ್ಕೆ ಜಗತ್ ವೃತ್ತದಿಂದ ಮುಖ್ಯರಸ್ತೆ ಮುಖಾಂತರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಗುವುದು.
ರೈತ ಮಹಿಳೆಯರಿಗೆ ಕೃಷಿ ತರಬೇತಿ
ಗುಲ್ಬರ್ಗ: ಇಲ್ಲಿನ ಕೋಟನೂರಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜು.22ರಿಂದ 24ರವರೆಗೆ ಆಧುನಿಕ ಬೇಸಾಯ ಪದ್ಧತಿ ಕುರಿತು ರೈತ ಮಹಿಳೆಯರಿಗೆ ಮೂರು ದಿನದ ತರಬೇತಿ ಆಯೋಜಿಸಲಾಗಿದೆ. ತರಬೇತಿ ಅವಧಿಯಲ್ಲಿ ಭಾಗವಹಿಸಿದ ರೈತ ಮಹಿಳೆಯರಿಗೆ ಉಚಿತ ಊಟ ಮತ್ತು ಪ್ರಯಾಣ ವೆಚ್ಚ ನೀಡಲಾಗುವುದು. ವಿವರಕ್ಕೆ ಮೊ. 94839 77791 ಅಥವಾ 94486 51201 ಸಂಪರ್ಕಿಸಬಹುದು.
ಇಂದು ಶಂಕುಸ್ಥಾಪನೆ
ಗುಲ್ಬರ್ಗ: ಗುಲ್ಬರ್ಗ ಮತ್ತು ಹೊಟಗಿ ನಡುವೆ ರೇಲ್ವೆ ಜೋಡಿ ಹಳಿ ಮತ್ತು ರೇಲು ನಿಲ್ದಾಣದ ಹೊಸ ಪ್ಲಾಟ್‌ಫಾರ್ಮ ಸಂಖ್ಯೆ 4ರಲ್ಲಿ ಪಾದಚಾರಿ ಮೇಲ್ಸೇತುವೆ ಕಾಮಗಾರಿಗೆ ಕೇಂದ್ರ ರೇಲ್ವೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಜು.23ರ ಮಂಗಳವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ನಗರದ ಡಾ. ಎಂ.ಎಸ್. ಪಂಡಿತ ರಂಗಮಂದಿರಲ್ಲಿ ಆಯೋಜಿಸಲಾಗಿರುವ ಈ ಕಾರ್ಯಕ್ರಮದಲ್ಲಿ ಸಂಸದ ಎನ್. ದರ್ಮಸಿಂಗ್, ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ, ರಾಜ್ಯ ಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಭಾಗವಹಿಸಲಿದ್ದಾರೆ.
ರೇಲ್ವೆ ಮೇಲ್ಸೇತುವೆಗೆ ಶಂಕು: ಬೀದರ್ ಹಾಗೂ ಗುಲ್ಬರ್ಗ ನಡುವೆ ರೇಲ್ವೆ ಮಾರ್ಗದ ಹಾದಿಯಲ್ಲಿ ಬೆಣ್ಣೆತೋರಾ ನದಿಗೆ ರೇಲ್ವೆ ಮೇಲ್ಸೆತುವೆ ನಿರ್ಮಾಣಕ್ಕೆ ಶಂಕುಸ್ಥಾಪನಾ ಸಮಾರಂಭವನ್ನು ರೇಲ್ವೆ ಇಲಾಖೆ ಜು. 23ರ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮಹಾಗಾಂವ್‌ನ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದೆ. ಕೇಂದ್ರ ರೇಲ್ವೆ ಖಾತೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಶಂಕುಸ್ಥಾಪನೆ ಕಾರ್ಯವನ್ನು ಉದ್ಘಾಟಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.