ಗುಲ್ಬರ್ಗಾ

ಕಾಲರಾ, ಬಿಸಿಯೂಟ: ಜಾಗೃತಿಗೆ ಸೂಚನೆ

Published On :

ಗುಲ್ಬರ್ಗ:   ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಹಣಕಾಸು ಮತ್ತು ಲೆಕ್ಕಪರಿಶೋಧನಾ ಸಭೆ ನಡೆಯಿತು.
ರಂಜಾನ್ ಹಾಗೂ ಮುಂಬರುವ ಶ್ರಾವಣ ಮಾಸದ ಪ್ರಯುಕ್ತ ಹಣ್ಣು- ಹಂಪಲು, ಖರ್ಜೂರ ಹಾಗೂ ಮಾಂಸದ ಊಟ ರಸ್ತೆಯ ಮೇಲೆ ಮಾರಾಟ ಮಾಡಲಾಗುತ್ತಿದೆ. ಇದರಿಂದ ಕಾಲರಾ ರೋಗ ಹರಡುವ ಸಾಧ್ಯತೆಗಳಿದ್ದು, ಕೂಡಲೇ ಅದನ್ನು ತಡೆಗಟ್ಟುವ ಕುರಿತು ಚರ್ಚಿಸಲಾಯಿತು.
ಬಿಹಾರದ ಬಿಸಿಯೂಟ ಸೇವಿಸಿ ಶಾಲಾ ಮಕ್ಕಳ ಸಾವಿನ ದುರಂತದ ಬಗ್ಗೆ ಗಮನದಲ್ಲಿಟ್ಟುಕೊಂಡು ಮಕ್ಕಳು ಊಟ ಸೇವಿಸುವ ಮುನ್ನ ಅದನ್ನು ಶಾಲಾ ಅಧಿಕಾರಿಗಳು ಹೈಜನಿಕ್ ಹಾಗೂ ವಿಷಯುಕ್ತ ಊಟವೆಂದು ಖಚಿತಪಡಿಸಿಕೊಂಡ ನಂತರ ಮಕ್ಕಳಿಗೆ ಊಟ ಬಡಿಸಬೇಕೆಂದು ಸೂಚಿಸಲಾಯಿತು.
ಶುದ್ಧ ಕುಡಿವ ನೀರು ಒದಗಿಸಿ: ಜಿಪಂ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಉಳಿದ ಹಣದಲ್ಲಿ ಹಾಗೂ ಶುದ್ಧ ಕುಡಿವ ನೀರು ಸರಬರಾಜಿಗೆ ವ್ಯವಸ್ಥೆ ಕಲ್ಪಿಸುವಂತೆ ಜಿಪಂ ಸದಸ್ಯ ಶಿವಪ್ರಭು ಪಾಟೀಲ್ ಒತ್ತಾಯಿಸಿದರು.
ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯಲ್ಲಿ ಕೋಟಿಗಟ್ಟಲೆ ಅವ್ಯವಹಾರ ನಡೆದಿದ್ದು, ಕೂಡಲೇ ಇಲ್ಲಿನ ಜಿಪಂ ಯೋಜನಾ ನಿರ್ದೇಶಕರ ವಿರುದ್ಧ ಕ್ರಮ ಜರುಗಿಸುವಂತೆ ಶಿವಪ್ರಭು ಪಾಟೀಲ್ ಆಗ್ರಹಿಸಿದರು.
ಕ್ರಿಮಿನಲ್ ಕೇಸ್: ಇದಕ್ಕೆ ಸ್ಪಂದಿಸಿದ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲವಿ ಆಕುರಾತಿ ಅವರು ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಿ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದರು.
ಸಭೆಯಲ್ಲಿ ಜಿಪಂ ಅಧ್ಯಕ್ಷ ಶರಣಪ್ಪ ಪಾಟೀಲ್ ತೇಲ್ಕೂರ್, ಜಿಪಂ ಯೋಜನಾ ನಿರ್ದೇಶಕ ಎಸ್.ಎಂ. ಕೆಂಚಣ್ಣನವರ್, ಡಿಎಚ್‌ಒ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿ ಸೇರಿದಂತೆ ಇತರ ಇಲಾಖೆಗಳ ಅಧಿಕಾರಿಗಳು, ಜಿಪಂ ಸದಸ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.