ಜಿಲ್ಲಾಭಿವೃದ್ಧಿಗೆ ವಿಶೇಷ ಹಣ ಕೊಡಿ
ಕ.ಪ್ರ. ವಾರ್ತೆ ಯಾದಗಿರಿ ಜು.22
ಜಿಲ್ಲೆ ಉದ್ಘಾಟನೆ ಸಂದರ್ಭದಲ್ಲಿ ಅಭಿವೃದ್ಧಿಗೆ ಅಂದಿನ ಮುಖ್ಯಮಂತ್ರಿಗಳು ಘೋಷಿಸಿದ 300 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಶಾಸಕ ಡಾ. ಎ.ಬಿ. ಮಾಲಕರಡ್ಡಿ ಸೋಮವಾರ ವಿಧಾನಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಜಿಲ್ಲೆಯ ಅಭಿವೃದ್ಧಿಗೆ 50 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಸಚಿವ ಎಸ್.ಆರ್. ಪಾಟೀಲ್ ಅವರು ಮಾಲಕರಡ್ಡಿಯವರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತದಲ್ಲಿ 10 ಕೋಟಿ ಲಭ್ಯ: ಪ್ರಗತಿಗೆ ಅನುಗುಣವಾಗಿ 3ಕಂತುಗಳಲ್ಲಿ 29.56 ಕೋಟಿ ಬಿಡುಗಡೆ ಮಾಡಲಾಗಿದೆ. ಇದರಿಂದ ಅಭಿವೃದ್ಧಿ ಸ್ಥಗಿತವಾಗಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಇದರಲ್ಲಿ 64 ಕಾಮಗಾರಿಗಳಲ್ಲಿ 15 ಪೂರ್ಣಗೊಳಿಸಲಾಗಿದೆ. 44 ಕಾಮಗಾರಿಗಳು ಪ್ರಗತಿಯಲ್ಲಿವೆ. 5 ಕಾಮಗಾರಿಗಳನ್ನು ಪ್ರಾರಂಭಿಸಬೇಕಿದೆ. ಪ್ರಗತಿಗೆ ಅನುಗುಣವಾಗಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಇನ್ನೂ 10.07 ಕೋಟಿ ಜಿಲ್ಲಾಡಳಿತದಲ್ಲಿ ಲಭ್ಯವಿದೆ ಎಂದು ತಿಳಿಸಿದರು.
ಹಿಂದುಳಿದವರ ಅಭಿವೃದ್ಧಿಗೆ ಒತ್ತು ನೀಡಿ: ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ, ಹಿಂದುಳಿದ ಜಿಲ್ಲೆಯ ಹಾಗೂ ಜನರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕೆಂದು ಮಾಲಕರಡ್ಡಿ ಆಗ್ರಹಿಸಿದರು.
ಕಳೆದ ಬಾರಿ ಶಾಸಕರಾಗಿದ್ದು, ಈಗ ಶಾಸಕರಾಗಿ ಮುಂದುವರೆದಿರುವ ಡಾ. ಮಾಲಕರಡ್ಡಿಯವರ 5 ಕೋಟಿ ಅನುದಾನದಲ್ಲಿ ಈಗಾಗಲೇ 3.05 ಕೋಟಿ ವೆಚ್ಚ ಮಾಡಲಾಗಿದೆ. ಅದರಲ್ಲಿ ಕನ್ನಡ ಭವನ, ಅಂಬೇಡ್ಕರ್ ಭವನ, ಗುರುಭವನ, ಜಿಲ್ಲಾ ರಂಗಮಂದಿರಗಳು ಸೇರಿವೆ. ಹಾಗೆಯೇ ಜಿಲ್ಲೆಯಲ್ಲಿ ಕಳೆದ ಬಾರಿ ಶಾಸಕರಾಗಿದ್ದ ಉಳಿದ ಮೂವರು ಶಾಸಕರಿಗೂ ಇದೇ ರೀತಿ ತಲಾ 5 ಕೋಟಿ ಅನುದಾನ ಹಂಚಿಕೆ ಮಾಡಲಾಗಿತ್ತು. ಇದರಲ್ಲಿ ಬಾಕಿ ಇರುವ ಅನುದಾನ ಬಿಡುಗಡೆ ಮಾಡಬೇಕಿದೆ ಎಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

