ಗುಲ್ಬರ್ಗಾ

ಕ್ಯಾರಿ ಓವರ್‌ಗೆ ಆಗ್ರಹ

Published On :

ಗುಲ್ಬರ್ಗ: ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಕ್ಯಾರಿ ಓವರ್ ಪದ್ಧತಿ ಜಾರಿಗೆ ತರಬೇಕೆಂದು ಆಗ್ರಹಿಸಿ ಹೈ.ಕ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ಒಕ್ಕೂಟದ ಮುಖಂಡರು ಜಿಲ್ಲಾ ಉಸ್ತುವಾರಿ ಮತ್ತು ಪೌರಾಡಳಿತ ಸಚಿವ ಖಮರುಲ್ ಇಸ್ಲಾಂ ಅವರಿಗೆ ಮನವಿ ಮಾಡಿದರು. ನಾಗಲಿಂಗಯ್ಯ ಮಠಪತಿ, ಕಲ್ಯಾಣರಾವ ಪಾಟೀಲ್, ಧರ್ಮಸಿಂಗ್ ತಿವಾರಿ, ಮನೋಹರ ಬೀರನೂರು, ನಿತೀನ್, ಮೋಹನ್, ನಿಜಾಮುದ್ದೀನ್, ಶಿವಕುಮಾರ್ ಇದ್ದರು.
ಇಂದು ಕೃಷಿ ದರ್ಶನ
ಗುಲ್ಬರ್ಗ: ಇಲ್ಲಿನ ದೂರದರ್ಶನ ಕೇಂದ್ರವು ಜು.24ರಂದು ಸಂಜೆ 5.30ರಿಂದ 6ರವರೆಗೆ ಕೃಷಿ ದರ್ಶನ ಕಾರ್ಯಕ್ರಮದಲ್ಲಿ ರೈತ ಬಾಂಧವರಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ. ಮಳೆಗಾಲದಲ್ಲಿ ಜಾನುವಾರುಗಳಿಗೆ ಬರುವ ರೋಗಗಳು ಮತ್ತು ಹತೋಟಿ ಕ್ರಮಗಳ ಕುರಿತು ಗುಲ್ಬರ್ಗ ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಸಂಗಮೇಶ್ವರ ಮಾಹಿತಿ ನೀಡಲಿದ್ದಾರೆ. ಪಶು ವೈದ್ಯಾಧಿಕಾರಿ ಡಾ. ವಿಶ್ವನಾಥ ಹೆಗ್ಗಾ ಕಾರ್ಯಕ್ರಮ ನಿರ್ವಹಣೆ ಮಾಡಲಿದ್ದಾರೆ. ಶ್ರೀನಿವಾಸ ಕಾಯಕ್ರಮ ಪ್ರಸ್ತುತಪಡಿಸಲಿದ್ದಾರೆ. ದೂ. 220491, 220492ಕ್ಕೆ ರೈತರು ಸಂಪರ್ಕಿಸಿ ತಜ್ಞರಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.