ಕೋರ್ಟ್ ಹಳೆಯ ಕಟ್ಟಡ ನವೀಕರಣಕ್ಕೆ ಎಂಎಲ್ಸಿ ಆಗ್ರಹ
ಗುಲ್ಬರ್ಗ: ಜಿಲ್ಲಾ ನ್ಯಾಯಾಲಯದ ಹಳೆಯ ಕಟ್ಟಡ ನವೀಕರಣ, ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಅಗತ್ಯವಿರುವ ಹೊಸ ಸವಲತ್ತುಗಳನ್ನು ಕಲ್ಪಿಸುವ ಕೆಲಸಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ತಿಳಿಸಿದ್ದಾರೆ. ಅವರು ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಅಲ್ಲಂಪ್ರಭು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹಳೆಯ ಕಟ್ಟಡ ನವೀಕರಣಗೊಳಸುವ ಕೆಲಸ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಅದನ್ನು ಪೂರ್ಣಗೊಳಿಸಿ ಸೇವೆಗೆ ಒದಗಿಸಿಕೊಡಲಾಗುವುದು ಎಂದರು. ಗುಲ್ಬರ್ಗ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಹೊಸದಾಗಿ ಗ್ರಂಥಾಲಯ ಕಟ್ಟಡವನ್ನು ನಿರ್ಮಿಸುವ ಕಾಮಗಾರಿ ನಡೆದಿದೆ. ಗುಲ್ಬರ್ಗ ಜಿಲ್ಲಾ ನ್ಯಾಯಾಲಯದಲ್ಲಿ 278 ಮತ್ತು ಯಾದಗಿರಿ ಕೋರ್ಟ್ನಲ್ಲಿ 87 ವಿವಿಧ ಹುದ್ದೆಗಳು ಖಾಲಿಯಿವೆ. ಅವುಗಳ ಭರ್ತಿಗೆ ಶೀಘ್ರವೇ ಪ್ರಕ್ರಿಯೆ ನಡೆಯಲಿದೆ. ಸಂವಿಧಾನದ 371(ಜೆ)ನೇ ವಿಧಿ ತಿದ್ದುಪಡಿ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ ಎಂದರು. ಯಾದಗಿರಿ ನಗರದಲ್ಲಿ ಹೊಸದಾಗಿ ನ್ಯಾಯಾಲಯ ಕಟ್ಟಡವನ್ನು ನಿರ್ಮಿಸಲು 23 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳುವ ಕುರಿತು ಶೀಘ್ರವೇ ಅಧಿಸೂಚನೆಯನ್ನು ಹೊರಡಿಸುವಂತೆ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಕೋರಲಾಗಿದೆ ಎಂದು ಸಚಿವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

