ಗುಲ್ಬರ್ಗಾ

ರಸ್ತೆ ಕಳಪೆ ಕಾಮಗಾರಿ: ಪೌರಾಯುಕ್ತರಿಗೆ ನೋಟಿಸ್

Published On :

ಯಾದಗಿರಿ: ಮುಖ್ಯಮಂತ್ರಿಗಳ ಸಣ್ಣ ನಗರ ಹಾಗೂ ಪಟ್ಟಣಗಳ ಅಭಿವೃದ್ಧಿ ಯೋಜನೆ ಅನುದಾನದಡಿ ಕೈಗೆತ್ತಿಕೊಂಡ ನಗರದ ಅಂಬೇಡ್ಕರ್ ವೃತ್ತದಿಂದ ಮೈಲಾಪುರ ಅಗಸಿವರೆಗಿನ ರಸ್ತೆ ಕಾಮಗಾರಿ ಸ್ಥಗಿತಗೊಂಡಿರುವುದಕ್ಕೆ ಕಾರಣ ಕೇಳಿ ಜಿಲ್ಲಾಧಿಕಾರಿಗಳು ನಗರಸಭೆ ಪೌರಾಯಕ್ತರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಾರೆ. ಯೋಜನೆಯಲ್ಲಿ ಕೈಗೊಂಡ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಚಂದ್ರಶೇಖರ ದಾಸನಕೇರಿ ಡಿಸಿಗೆ ಮನವಿ ಸಲ್ಲಿಸಿದ ಹಿನ್ನೆಯಲ್ಲಿ ಜಿಲ್ಲಾಧಿಕಾರಿಯವರು ನೋಟಿಸ್ ಜಾರಿ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ದಾಸನಕೇರಿ, ಈಗಾಗಲೇ ಹಲವು ಬಾರಿ ಈ ಪ್ರಕರಣದ ಕುರಿತು ಹೋರಾಟ, ಮನವಿ ಸಲ್ಲಿಸಿದ್ದನ್ನು ಮಾನ್ಯ ಮಾಡಿರುವ ಜಿಲ್ಲಾಧಿಕಾರಿಗಳು ನಗರಸಭೆ ಅಧಿಕಾರಿಗಳಿಗೆ ಜು.23ರಂದು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ಅಂದಾಜು 75 ಲಕ್ಷ ವೆಚ್ಚದ ಕಾಮಗಾರಿ: ಅಂದಾಜು 75 ಲಕ್ಷ ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಆದರೆ ಅರ್ಧಕ್ಕೂ ಹೆಚ್ಚು ಹಣ ಖರ್ಚು ತೋರಿಸಿದ ನಗರಸಭೆ ಕಾಮಗಾರಿ ಪೂರ್ಣಗೊಂಡಿರುವುದಾಗಿ ಪ್ರಕಟಿಸಿತ್ತು. ಇದನ್ನು ಪ್ರತಿಭಟಿಸಿ ಚಂದ್ರಶೇಖರ ದಾಸನಕೇರಿ ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿ ಕಾಮಗಾರಿ ಕಳಪೆಯಾಗಿದ್ದು, ಭಾರೀ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಇವರ ದೂರು ಆಧರಿಸಿ ಜಿಲ್ಲಾಧಿಕಾರಿಗಳು ನಗರಸಭೆ ಪೌರಾಯುಕ್ತರಿಗೆ, ಅಭಿಯಂತರುಗಳಿಗೆ ಕಾರಣ ಕೇಳಿ ನೋಟಿಸ್ ಜಾರಿಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.