'ಕಾಲಮಿತಿಯೊಲ್ಲೇ ಉತ್ತಮ ಕಾಮಗಾರಿ ಪೂರ್ಣಗೊಳಿಸಿ'
ಯಾದಗಿರಿ: ನಗರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಜಿಲ್ಲಾ ಸಂಕೀರ್ಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಪಶು ಸಂಗೋಪನಾ ಇಲಾಖೆ ಪ್ರಧಾನ ಕಾರ್ಯದರ್ಶಿ ವಿ. ಮಂಜುಳಾ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಹೊರವಲಯದಲ್ಲಿ ಕರ್ನಾಟಕ ಗೃಹ ಮಂಡಳಿಯಿಂದ ಸುಮಾರು 60 ಎಕರೆ ನಿವೇಶನದಲ್ಲಿ 45 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ಜಿಲ್ಲಾ ಸಂಕೀರ್ಣ ಕಾಮಗಾರಿಯ ಪ್ರಗತಿಯನ್ನು ಅವರು ವೀಕ್ಷಿಸಿದರು. ಕಾಮಗಾರಿಯ ಗುಣಮಟ್ಟ ಕಾಪಾಡುವುದರ ಜತೆಗೆ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದರು. ಹೊಸ ಜಿಲ್ಲೆಯಾಗಿದ್ದರಿಂದ ಹಲವಾರು ಸರ್ಕಾರಿ ಕಚೇರಿಗಳು ಖಾಸಗಿ ಕಟ್ಟಡದಲ್ಲಿ ಕಾರ್ಯ ಮಾಡುತ್ತಿವೆ. ಅದಕ್ಕಾಗಿ ಕಂದಾಯ ಇಲಾಖೆ ವ್ಯಾಪ್ತಿಯ ಕಚೇರಿಗಳನ್ನು ಒಂದೇ ಕಟ್ಟಡಕ್ಕೆ ತರಲು ಈ ಕಟ್ಟಡ ನಿರ್ಮಾಣವಾಗುತ್ತಿದೆ. ಇದಕ್ಕೆ ಈಗಾಗಲೇ ಸರ್ಕಾರ 45 ಕೋಟಿ ಅನುದಾನ ಒದಗಿಸಿದೆ. ಅವಶ್ಯಕತೆ ಬಿದ್ದಲ್ಲಿ ಹೆಚ್ಚಿನ ಅನುದಾನ ಒದಗಿಸಲು ಸರ್ಕಾರ ಸಿದ್ದವಿದೆ ಎಂದು ತಿಳಿಸಿದರು.
ತಾವು ಆಗಾಗ ಭೇಟಿ ಮಾಡಿ ಕಟ್ಟಡದ ಗುಣಮಟ್ಟವನ್ನು ನೋಡಬೇಕು ಎಂದು ಜತೆಗಿದ್ದ ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರರಿಗೆ ಸಲಹೆ ಮಾಡಿದರು. ಈ ಸಂದರ್ಭದಲ್ಲಿ ಕೆಎಚ್ಬಿ ಅಧಿಕಾರಿಗಳು ಜತೆಗಿದ್ದು ಕಟ್ಟಡದ ಮಾಹಿತಿಯನ್ನು ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

