ಡೀಸೆಲ್ ಕಲಬೆರಕೆ ತಡೆಗೆ ಒತ್ತಾಯ
ಯಾದಗಿರಿ: ನಗರದಲ್ಲಿ ಡೀಸೆಲ್‌ನಲ್ಲಿ ಸೀಮೆಎಣ್ಣೆ ಸೇರಿಸಿ ಮಾರಾಟ ಮಾಡುತ್ತಿದ್ದು, ಇದರಿಂದಾಗಿ ವಾಹನ ಚಾಲಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಅದಕ್ಕಾಗಿ ಇದರ ಬಗ್ಗೆ ಸೂಕ್ತ ಕ್ರಮ ಜರಗಿಸಬೇಕೆಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೊಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಭೀಮರಾಯ ಕಂದಕೂರ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರಿಗೆ ಮತ್ತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.
ನಗರದ ಕೆಲ ಪೆಟ್ರೋಲ್ ಬಂಕ್‌ಗಳಲ್ಲಿ ಡೀಸೆಲ್‌ನಲ್ಲಿ ಸೀಮೆಎಣ್ಣೆ ಮತ್ತು ನೀರು ಬೆರಕೆ ಮಾಡಿ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ವಾಹನಗಳ ಕ್ಷಮತೆ ಕಡಿಮೆಯಾಗುತ್ತಿದೆ. ಅಲ್ಲದೇ ವಾಹನಗಳು ದುರಸ್ತಿಗೆ ಬರುತ್ತಿವೆ. ಆದ್ದರಿಂದ ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಜರಗಿಸಬೇಕೆಂದು ಒತ್ತಾಯಿಸಿದ್ದಾರೆ.
ಮನವಿ ಸ್ವೀಕರಿಸಿದ ಉಪ ನಿರ್ದೇಶಕರು ತನಿಖೆ ನಡೆಸಿ ಸೂಕ್ತ ಕ್ರಮ ಜರಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

