ಗುಲ್ಬರ್ಗಾ

ಬದಲಾವಣೆಗೆ ಜನರ ಸಹಕಾರ ಅಗತ್ಯ

Published On :

ಕನ್ನಡಪ್ರಭ ವಾರ್ತೆ  ಚಿಂಚೋಳಿ  ಜು.27
ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ತರಬೇಕಾಗಿದೆ. ಇದಕ್ಕೆ ಜನರ ಸಹಕಾರ ತುಂಬಾ ಅಗತ್ಯ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮಿತಸಿಂಗ್ ಹೇಳಿದರು.
ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಮಾತನಾಡಿ, ಪೊಲೀಸರಿಗೆ ಜನರು ಮಾಹಿತಿ ನೀಡುವುದರಿಂದ ಅಪರಾಧ ಪ್ರಕರಣಗಳನ್ನು ತಡೆಯಬಹುದಾಗಿದೆ. ಪೊಲೀಸ್ ಠಾಣೆಗೆ ಬರುವ ದೂರುದಾರನಿಗೆ ಸಹಕಾರ ನೀಡಿ ನಂತರ ಸಮಸ್ಯೆ ಪರಿಹರಿಸಲಾಗುತ್ತಿದೆ ಎಂದರು.
ಸಭೆಯಲ್ಲಿ ಪಟ್ಟಣದ ಬಿಜೆಪಿ ಹಿರಿಯ ಮುಖಂಡ ರಮೇಶ ಯಾಕಾಪುರ ಮಾತನಾಡಿ, ತಾಲೂಕಿನ ಅನೇಕ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ. ಕಳ್ಳತನ ಮತ್ತು ಅತ್ಯಾಚಾರ ಪ್ರಕರಣಗಳು ನಡೆದಿವೆ.
ರಾತ್ರಿ ಗಸ್ತು ಹೆಚ್ಚಾಗಬೇಕು, ಖಾಲಿ ಇರುವ ಪೊಲೀಸ್ ಹುದ್ದೆಗಳನ್ನು ಭರ್ತಿಗೊಳಿಸಬೇಕು ಎಂದು ಒತ್ತಾಯಿಸಿದರು.
ದಲಿತ ಮುಖಂಡ ಗೋಪಾಲರಾವ ಕಟ್ಟಿಮನಿ, ನ್ಯಾಯವಾದಿ ಶ್ರೀಮಂತ ಕಟ್ಟಿಮನಿ, ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ವಾಮನರಾವ ಕೊರವಿ, ಗೌತಮ ಬೊಮ್ಮನಳ್ಳಿ, ರಮೇಶ ಸೀಳಿನ್, ಮಗದೂಮ ಖುರೇಶಿ, ಉಮಾ ಪಾಟೀಲ್, ಪಪಂ ಸದಸ್ಯರಾದ ಶಾಮರಾವ ಕೊರವಿ, ಅಬ್ದುಲ್ ಬಾಸೀತ್ ಅವರು ಪಟ್ಟಣದ ಹಲವು ಸಮಸ್ಯೆಗಳ ಬಗ್ಗೆ ವಿವರಿಸಿದರು.
ಬಸವರಾಜ ಪಾಟೀಲ್ ಹದನೂರ, ಮಧುಸೂಧನ ಕಾಟಾಪುರ, ಗೌತಮ ಪಾಟೀಲ್, ಅಜೀತ್ ಪಾಟೀಲ್, ಮಲ್ಲಿಕಾರ್ಜುನ ಪಾಲಾಮೂರ್, ಕೆ.ಎಂ. ಬಾರಿ, ಭೀಮಶೆಟ್ಟಿ ಜಾಬಶೆಟ್ಟಿ ಸೇರಿದಂತೆ ಪಟ್ಟಣದ ಅನೇಕರು ಭಾಗವಹಿಸಿದ್ದರು.
ಡಿವೈಎಸ್ಪಿ ಪರಶುರಾಮ ಕೋರವಾರ ಸ್ವಾಗತಿಸಿದರು. ಸಿಪಿಐ ಇಸ್ಮಾಯಿಲ್ ಶರೀಫ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.