ಶಿಕ್ಷಣ ಉದ್ಯಮವಾಗಿದ್ದು ವಿಪರ್ಯಾಸ
ಕನ್ನಡಪ್ರಭ ವಾರ್ತೆ ಸೇಡಂ ಜು.27
ಶಿಕ್ಷಣ ಹಾಗೂ ರೋಗಿಗಳ ಸೇವೆ ಉದ್ಯಮಗಳಾಗಿವುದು ವಿಪರ್ಯಾಸ. ಉನ್ನತ ಶಿಕ್ಷಣ ಪಡೆದ ಪ್ರತಿಯೊಬ್ಬರೂ ದೇಶಕ್ಕಾಗಿ ದುಡಿಯಬೇಕು ಎಂದು ರಾಜ್ಯಸಭಾ ಸದಸ್ಯ ಡಾ. ಬಸವರಾಜ ಪಾಟೀಲ್ ಸೇಡಂ ಹೇಳಿದರು.
ಇಲ್ಲಿನ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಹಿರಿಯ ವೈದ್ಯ ಡಾ. ಎಸ್.ಬಿ. ಅಗ್ನಾಳ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸೇಡಂ ತಾಲೂಕು ಆಕರ್ಷಣೀಯ ಕೇಂದ್ರವಾಗಬೇಕೆಂಬ ಆಕಾಂಕ್ಷೆ ಹೊಂದಿರುವುದಾಗಿ ಹೇಳಿದರು.
ನಿವೃತ್ತಿ ನಂತರವೂ ಸಾಮಾಜಿಕ ಕಳಕಳಿಯಿಂದ ವೈದ್ಯ ವೃತ್ತಿಯಲ್ಲಿ ಮುಂದುವರೆದಿರುವ ಡಾ. ಎಸ್.ಬಿ. ಅಗ್ನಾಳರ್ ಕಾರ್ಯ ಶ್ಲಾಘನೀಯ ಎಂದರು.
ಡಾ.ಎಸ್.ಬಿ. ಅಗ್ನಾಳ ಸನ್ಮಾನ ಸ್ವೀಕರಿಸಿ ಮಾತನಾಡಿದರು. ವಿಶೇಷ ತಹಸೀಲ್ದಾರ್ ದಯಾನಂದ ಪಾಟೀಲ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎನ್. ಶ್ರೀನಿವಾಸ ಮಾತನಾಡಿದರು. ತಾಪಂ ಅಧ್ಯಕ್ಷ ಗೋವಿಂದ ಯಾಕಂಬ್ರಿ, ಪತ್ರಕರ್ತರಾದ ರಮೇಶ ಇಂಜಳ್ಳಿಕರ್, ಮಹ್ಮದ್ ಮುನೀಬ್, ಅಬ್ದುಲ್ ಗಫಾರ್, ಜಾವೀದ್ ನಿರ್ನಾವಿ, ಶರಣಪ್ಪ ಮಹಾಗಾಂವ, ಶರಣಪ್ಪ ಎಳ್ಳಿ, ದಿಲ್ಷಾದ್ ನಿರ್ನಾವಿ ಇನ್ನಿತರರು ಇದ್ದರು.
ಶರಣಪ್ಪ ಎಳ್ಳಿ ಪ್ರಾರ್ಥನೆ ಗೀತೆ ಹಾಡಿದರು. ನಾಗಯ್ಯಸ್ವಾಮಿ ಬೊಮ್ನಳ್ಳಿ ಸ್ವಾಗತಿಸಿದರು. ಮಹಿಪಾಲರೆಡ್ಡಿ ಮುನ್ನೂರ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜಕುಮಾರ ಕಟ್ಟಿ ನಿರೂಪಿಸಿದರು. ಶಿವಕುಮಾರ ಬಿ. ನಿಡಗುಂದಾ ವಂದಿಸಿದರು. ಇದೇ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಅಂಗವಾಗಿ ಹಿರಿಯ ವೈದ್ಯ ಡಾ. ಎಸ್.ಬಿ. ಅಗ್ನಾಳ ಅವರನ್ನು ಸನ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

