ನಂದಿನಿ ಸಂಚಾರಿ ವಾಹನಕ್ಕೆ ಚಾಲನೆ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ಜು.27
ನಗರದ ಪ್ರಮುಖ ಸ್ಥಳಗಳಲ್ಲಿ ಗ್ರಾಹಕರಿಗೆ ನೇರವಾಗಿಯೇ ಹಾಲು, ಮೊಸರು, ಬೆಣ್ಣೆ, ತುಪ್ಪ, ಬಾದಾಮಿ ಹಾಲು ಮತ್ತು ಪೇಡಾ ಸೇರಿದಂತೆ ನಂದಿನಿಯ ಎಲ್ಲ ಉತ್ಪನ್ನಗಳನ್ನು ಒದಗಿಸುವ ನಂದಿನಿ ಸಂಚಾರಿ ವಾಹನಕ್ಕೆ ಗುಲ್ಬರ್ಗ, ಬೀದರ್ ಹಾಗೂ ಯಾದಗಿರಿ ಹಾಲು ಒಕ್ಕೂಟದ ಅಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ ಶನಿವಾರ ಚಾಲನೆ ನೀಡಿದರು.
ಈ ಸಂಚಾರಿ ವಾಹನವು ಬೆಳಗ್ಗೆಯಿಂದ ರಾತ್ರಿವರೆಗೂ ನಗರದ ಪ್ರಮುಖ ಬಡಾವಣೆಗಳಲ್ಲಿ ಸಂಚರಿಸಿ ಅಲ್ಲಿನ ಗ್ರಾಹಕರಿಗೆ ನಂದಿನಿಯ ಉತ್ಪನ್ನಗಳನ್ನು ಎಂಆರ್ಪಿ ದರದಲ್ಲಿಯೇ ಒದಗಿಸಲಿದೆ. ಇದೀಗ ಪ್ರಾಯೋಗಿಕವಾಗಿ ಒಂದು ಸಂಚಾರಿ ವಾಹನಕ್ಕೆ ಚಾಲನೆ ನೀಡಲಾಗಿದೆ. ಗ್ರಾಹಕರ ಪ್ರತಿಕ್ರಿಯೆ ನೋಡಿಕೊಂಡು ಮತ್ತೊಂದು ವಾಹನವನ್ನು ಓಡಿಸಲಾಗುವುದೆಂದು ಅಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ ನಂದಿನಿ ಸಂಚಾರಿ ವಾಹನಕ್ಕೆ ಚಾಲನೆ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಎಲ್ಲೆಲ್ಲಿ ವಾಹನ ಸಂಚಾರ: ಸಂಚಾರಿ ವಾಹನದಲ್ಲಿ ನಂದಿನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ನಗರದ ಜಗತ್ ಸರ್ಕಲ್, ಹಜರತ್ ಖಾಜಾ ಬಂದೇ ನವಾಜ್ ದರ್ಗಾ, ಸೂಪರ್ ಮಾರ್ಕೆಟ್, ಎನ್.ವಿ. ಕಾಲೇಜ್, ಜೇವರ್ಗಿ ಕ್ರಾಸ್, ಗಂಜ್ ಬಸ್ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಈ ವಾಹನ ಸಂಚರಿಸಲಿದೆ ಎಂದು ಬಿರಾದಾರ ಹೇಳಿದರು.
ವಾಹನದ ಯಶಸ್ಸು ಆಧರಿಸಿ ಮುಂದೆ ನಗರದ ಎಲ್ಲ ಬಡಾವಣೆಗಳಿಗೂ ನಂದಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಕಾರ್ಯ ನಿರ್ವಹಿಸಲಾಗುವುದು. ಎಮ್ಮೆ ಹಾಲಿಗೆ ಹೆಚ್ಚಿನ ಬೇಡಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಗುಲ್ಬರ್ಗ ಮತ್ತು ಬೀದರ್ನಲ್ಲಿ ಪ್ರತ್ಯೇಕವಾಗಿ ಎಮ್ಮೆ ಮತ್ತು ಆಕಳ ಹಾಲು ಸಂಗ್ರಹ ಹಾಗೂ ಮಾರಾಟ ವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ. ಬುಕ್ಕಾ ಮಲ್ಲಿಕಾರ್ಜುನ, ಜನರಲ್ ಮ್ಯಾನೇಜರ್ ವಿಜಯಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

