ಬಸವಸಾಗರ ಜಲಾಶಯಕ್ಕೆ ಶಾಸಕ ಬಾಬುರಾವ ಚಿಂಚನಸೂರ್ ಬಾಗಿನ
ಕನ್ನಡಪ್ರಭ ವಾರ್ತೆ ಯಾದಗಿರಿ ಜು.28
ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ್ ಚಿಂಚನಸೂರ್ ಭಾನುವಾರ ಸುರಪುರ ತಾಲೂಕಿನ ಬಸವಸಾಗರ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.
ನಂತರ ಮಾತನಾಡಿ, ಜಿಲ್ಲೆಯ ರೈತರಿಗೆ ಅನುಕೂಲ ಮಾಡಲು, ಹಿಂಗಾರು- ಮುಂಗಾರು ಅನುಕೂಲಕ್ಕಾಗಿ ಜಲಾಶಯದಿಂದ ಹೆಚ್ಚಿನ ನೀರನ್ನು ಬೀಡುಗಡೆ ಮಾಡಲಾಗಿದೆ. ಈ ಹಿಂದಿನ ಸರ್ಕಾರಗಳು ಆಗಸ್ಟ್ನಲ್ಲಿ ಕಾಲುವೆಗೆ ನೀರನ್ನು ಬಿಡುತ್ತಿದ್ದರು. ನಮ್ಮ ಸರ್ಕಾರ ಬಂದ ಎರಡು ತಿಂಗಳಲ್ಲೇ ರೈತರ ಸಮಸ್ಯೆಗಳಿಗೆ ಸ್ಪಂದಿಸಲು, ಅವರ ಆರ್ಥಿಕ ಪರಿಸ್ಥಿತಿ ಸುಧಾರಿಸಿ ಬಡತನ ನಿವಾರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಆದ್ದರಿಂದ ಕಾಲುವೆಗೆ ಹೆಚ್ಚಿನ ನೀರನ್ನು ಬೀಡುಲಾಗುತ್ತಿದೆ ಎಂದು ಹೇಳಿದರು.
ಹಲವು ಯೋಜನೆ: ಕೇಂದ್ರ ಸರ್ಕಾರ ನೀರಾವರಿ ಯೋಜನೆಗಳಿಗಾಗಿ 4 ಸಾವಿರ ಕೋಟಿ ಮಂಜೂರು ಮಾಡಿದೆ. ಜಿಲ್ಲೆಯ ಬಡಜನರಿಗೆ ಮತ್ತು ನಿರುದ್ಯೋಗಿಗಳಿಗೆ ನೆರವಾಗಲು 10 ಸಾವಿರ ಕೋಟಿ ವೆಚ್ಚದ ಅಂತಾರಾಷ್ಟ್ರೀಯ ಮಟ್ಟದ ಜವಳಿ ಪಾರ್ಕ್ ಮಂಜೂರು ಮಾಡಿದೆ ಎಂದು ತಿಳಿಸಿದರು.
ತೂಗು ಸೇತುವೆ ನಿರ್ಮಾಣ: ಪ್ರವಾಹದಿಂದ ಬಾಧಿತವಾಗಿರುವ ನೀಲಕಂಠರಾಯನಗಡ್ಡಿ ಗ್ರಾಮಸ್ಥರ ಅನುಕೂಲಕ್ಕಾಗಿ ಕೃಷ್ಣಾ ನದಿ ಮೇಲಿಂದ ತೂಗು ಸೇತುವೆ ನಿರ್ಮಿಸುವ ಉದ್ದೇಶ ಹೊಂದಲಾಗಿದೆ. ಈಗ ನಾರಾಯಣಪುರ ಜಲಾಶಯದಿಂದ ಬಿಡಲಾದ ನೀರಿನಿಂದ ಹಾನಿಗೊಳಗಾದ ಬೆಳೆಗಳ ಅಂದಾಜು ಸಿದ್ಧಪಡಿಸಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರ ನೀಡುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು.
ಉದ್ಯಾನವನ ಅಭಿವೃದ್ಧಿ: ನಿಗಮದ ಆಸ್ತಿ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ಡಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಬಸವಸಾಗರ ಜಲಾಶಯ ಸಮೀಪ ಉದ್ಯಾನವನ ಅಭಿವೃದ್ಧಿ ಕುರಿತು ಸಹ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನೀರಾವರಿ ಯೋಜನೆ ಆಧುನೀಕರಣ: ಕೊಪ್ಪಳ ಏತನೀರಾವರಿ ಯೋಜನೆಗೆ 1,200 ಕೋಟಿ ಹಾಗೂ ನಂದವಾಡಗಿ ಏತನೀರಾವರಿ ಯೋಜನೆಯ ಆಧುನೀಕರಣಕ್ಕಾಗಿ 500 ಕೋಟಿ ಮಂಜೂರಾತಿ ಹಂತದಲ್ಲಿ ಇದೆ ಎಂದು ಸಚಿವರು ತಿಳಿಸಿದರು.
ಅಮರೇಶ್ವರಿ ಚಿಂಚನಸೂರ್, ಜಿಪಂ ಉಪಾಧ್ಯಕ್ಷ ಶರಣಿಕಕುಮಾರ್, ಕೆಬಿಜೆಎನ್ನೆಲ್ ಮುಖ್ಯ ಅಭಿಯಂತರ ಎನ್.ಸುದರ್ಶನ, ಕಾರ್ಯನಿರ್ವಾಹಕ ಅಭಿಯಂತರ ಎಸ್.ಬಿ. ಪಾಟೀಲ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

