ತಲಸ್ಪರ್ಶಿ ಅಧ್ಯಯನ ನಡೆಯಲಿ: ರಂಗರಾಜ
ಶಹಾಪುರ: ನಾಡಿನ ಹಲವಾರು ನಿರ್ಲಕ್ಷಿತ ಸಮುದಾಯಗಳ, ಕೂಲಿಕಾರರ, ಬಡವರ, ದಲಿತರ ಬದುಕು ಬವಣೆಗಳ ಕುರಿತು ತಲಸ್ಪರ್ಶಿ ಅಧ್ಯಯನ ನಡೆಯಬೇಕಾದದ್ದು ಅವಶ್ಯಕ ಎಂದು ಬಳ್ಳಾರಿ ವಿಶ್ವವಿದ್ಯಾಲಯದ ಕುಲಸಚಿವ ಡಾ. ರಂಗರಾಜ ವನದುರ್ಗ ಅಭಿಪ್ರಾಯಪಟ್ಟರು.
ಪಟ್ಟಣದ ಸಹೃದಯ ಬಳಗದ ವತಿಯಿಂದ ಹಮ್ಮಿಕೊಂಡ ನಯನ ಕೆ.ಜೆ. ಅವರ ಅಂತರ ಕೃತಿ ಬಿಡುಗಡೆ ಮಾಡಿ ಅವರು ಮಾತನಾಡಿದರು. ಯುವ ತೆಲೆಮಾರಿನವರು ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕಿ ಡಾ. ನಾಗಾಬಾಯಿ ಮಾತನಾಡಿ, ಮಹಿಳೆಯರ ಸಾಹಿತ್ಯ ಬರವಣಿಗೆಯ ಬೆಳವಣಿಗೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಪತ್ರಕರ್ತ ದೇವು ಪತ್ತಾರ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ನಯನ ಅವರ ಕೃತಿ ಅವಶ್ಯಕ ಎಂದು ಹೇಳಿದರು. ಭೀಮಣ್ಣ ಅಂಚೆಸೂಗೂರ ಅಂತರ ಕಥಾ ಸಂಕಲನ ಕುರಿತು, ಡಾ. ಶೈಲಜಾ ಬಾಗೇವಾಡಿಯವರು ಕಣಜ ಕೃತಿ ಕುರಿತು ವಿಮರ್ಶೆ ಮಾಡಿದರು. ಲೇಖಕಿ ನಯನ ಮಾತನಾಡಿದರು. ಚಂದ್ರಕಾಂತ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಮೇಘಾ ಹೈಯಾಳಕರ ಸ್ವಾಗತಿಸಿದರು. ಡಾ. ಬಸವರಾಜ ಇಜೇರಿ ನಿರೂಪಿಸಿದರು. ರಾಜಭಕ್ಷ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

