ಗುಲ್ಬರ್ಗಾ

ಇಂದು ಫೋನ್ ಇನ್ ಕಾರ್ಯಕ್ರಮ

Published On :

ಗುಲ್ಬರ್ಗ: ಗುಲ್ಬರ್ಗ ದೂರದರ್ಶನ ಕೇಂದ್ರವು ರೈತರಿಗೆ ಜು.31 ರಂದು ಸಂಜೆ 5.30 ರಿಂದ 6ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಿದೆ. ಗುಲ್ಬರ್ಗ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಳತ್ಕರ್ ಮತ್ತು ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಬೇವಣಗಿ ಭೂ ಚೇತನ ಯೋಜನೆ ಕುರಿತು ಮಾಹಿತಿ ನೀಡಲಿದ್ದಾರೆ. ಕೆ.ಆರ್. ಶ್ರೀನಿವಾಸ ಕಾರ್ಯಕ್ರಮ ನಿರ್ಮಾಣ ಮಾಡಲಿದ್ದಾರೆ. 220491, 220492ಕ್ಕೆ  ಸಂಪರ್ಕಿಸಿ ರೈತರು ತಮ್ಮ ಪ್ರಶ್ನೆಗಳಿಗೆ ತಜ್ಞರಿಂದ ಪರಿಹಾರ ಕಂಡುಕೊಳ್ಳಬಹುದು ಎಂದು ಕೇಂದ್ರದ ಸಹಾಯಕ ನಿರ್ದೇಶಕ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಇಂದು ಕಾರ್ಯಾಗಾರ
ಗುಲ್ಬರ್ಗ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಕೆನೆಭರಿತ ಹಾಲಿನ ಪುಡಿಯಿಂದ ತಯಾರಿಸಿ ಹಾಲನ್ನು ನೀಡುವ ಯೋಜನೆ ಆ.1ರಿಂದ ಅನುಷ್ಠಾನಗೊಳಿಸಲಾಗುತ್ತಿರುವ ಸಂಬಂಧವಾಗಿ ಜು. 31ರಂದು ತಾಲೂಕು ಹಂತದಲ್ಲಿ ಮುಖ್ಯ ಶಿಕ್ಷಕರುಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕೆಎಂಎಫ್ ಸಂಸ್ಥೆಯ ಮೂಲಕ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ನೌಕರರ ಸಂಘಕ್ಕೆ ಆಯ್ಕೆ
ಜೇವರ್ಗಿ: ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷರಾಗಿ ಡಿ.ಬಿ. ಪಾಟೀಲ್ ಅವರು ಗುರುವಾರ ಅವಿರೋಧವಾಗಿ ಆಯ್ಕೆಯಾದರು. ಇದೇ ಸಂದರ್ಭದಲ್ಲಿ ನೌಕರರ ರಾಜ್ಯ ಪರಿಷತ್ ಸದಸ್ಯರಾಗಿ ವಿರುಪಾಕ್ಷಿ ಹಿರೇಗೌಡ, ಖಜಾಂಚಿಯಾಗಿ ರಾಜಶೇಖರ ಧನ್ನರಡ್ಡಿ ಅವಿರೋಧವಾಗಿ ಆಯ್ಕೆಯಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.