ಕಾಲೇಜು ಮೂಲ ಸೌಕರ್ಯಕ್ಕೆ ಆಗ್ರಹ
ಚಿಂಚೋಳಿ: ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿರುವ ಸರ್ಕಾರಿ ಪಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸಿ ಕೊಡಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾಲೇಜು ಪ್ರಾಚಾರ್ಯ ಮಹ್ಮದ್ ಗೌಸೋದ್ದೀನ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲೂಕಿನ ಸುಲೇಪೇಟ್ ಅತಿ ದೊಡ್ಡ ಗ್ರಾಮವಾಗಿದ್ದು ಇದರ ಸುತ್ತಲಿನ 30ಕ್ಕೂ ಹೆಚ್ಚು ಗ್ರಾಮಗಳ ಕಾಲೇಜು ವಿದ್ಯಾರ್ಥಿಗಳು ಇಲ್ಲಿಗೆ ವಿದ್ಯಾಭ್ಯಾಸ ಮಾಡಲು ಬರುತ್ತಾರೆ. ಆದರೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳುವುದಕ್ಕೆ ಡೆಸ್ಕ್ ಮತ್ತು ಕುರ್ಚಿಗಳಿಲ್ಲ ಎಂದು ತಿಳಿಸಿದರು. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಕಾಲೇಜು ಆವರಣದಲ್ಲಿ ನಿರ್ಮಿಸಿದ ಹೊಸ ಕಟ್ಟಡದಲ್ಲಿ ತರಗತಿಗಳು ನಡೆಯುತ್ತಿಲ್ಲ. ಹೀಗಾಗಿ ಇಲ್ಲಿ ಕುಡುಕರ ಮತ್ತು ನಾಯಿ ಕುರಿಗಳ ಆಶ್ರಯ ತಾಣವಾಗಿದೆ. ಸೌಲಭ್ಯಗಳನ್ನು ವಾರದಲ್ಲಿ ಒದಗಿಸಿಕೊಡದಿದ್ದಲ್ಲಿ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಾಳೆ ಚುನಾವಣೆ
ಚಿತ್ತಾಪುರ: ಇಲ್ಲಿಯ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ಚುನಾವಣೆ ಆ.1 ರಂದು ನಡೆಯಲಿದೆ ಎಂದು ಚುನಾವಣಾಧಿಕಾರಿ ಸುಭಾಷ ಸುರೆ ಹಾಗೂ ಸಹಾಯಕ ಚುನಾವಣಾಧಿಕಾರಿ ಇಸ್ಮಾಯಿಲ್ ಪಟೇಲ್ ತಿಳಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಆರೋಗ್ಯ ಇಲಾಖೆ ದ್ವಿತೀಯ ದರ್ಜೆ ಸಹಾಯಕ, ಪರಶುರಾಮ ಹಾಗೂ ಪ್ರಾಥಮಿಕ ಶಾಲೆ ಶಿಕ್ಷಕ ಹಾಗೂ ಕ್ಷೇತ್ರ ಸಂಪನ್ಮೂಲ ವ್ಯಕ್ತಿ (ಸಿಆರ್ಪಿ) ಬಸವರಾಜ ಬಳುಂಡಿಗಿ, ಗುಂಡಗುರ್ತಿ ಪ್ರೌಢಶಾಲೆ ಮುಖ್ಯಗುರು ಶ್ರೀಮಂತ ಹೊಸಮನಿ ಸ್ಪರ್ಧಿಸಿದ್ದಾರೆ. ರಾಜ್ಯ ಪರಿಷತ್ ಸ್ಥಾನಕ್ಕೆ ಸಹಕಾರ ಇಲಾಖೆಯ ನವಲೆ ಭಾಗಪ್ಪ ಹಾಗೂ ದೈಹಿಕ ಶಿಕ್ಷಕ ನಾಗೇಂದ್ರಪ್ಪ ಕಾಶಿ ಸ್ಪರ್ಧಿಸಿದ್ದಾರೆ. ಅಂದು ಬೆಳಗ್ಗೆ 11ರಿಂದ ಸಂಜೆ 4ಗಂಟೆವರೆಗೆ ಸರ್ಕಾರಿ ನೌಕರರ ಭವನದಲ್ಲಿ ಮತದಾನ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

