ಗುಲ್ಬರ್ಗಾ

ಅಧಿಕಾರಿಗಳ ವರ್ಗಾವಣೆಗೆ ವೀರ ಕನ್ನಡಿಗ ಸೇನೆ ಆಗ್ರಹ

Published On :

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜು.31
ನಗರದ ಕೆಲವು ಸರ್ಕಾರಿ ಕಚೇರಿಗಳಲ್ಲಿ ಕನಿಷ್ಠ ಮೂರು ವರ್ಷದಿಂದ ಐದು ವರ್ಷಗಳವರೆಗೆ ಸೇವೆ ಸಲ್ಲಿಸಿರುವ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಬೇರೆಡೆಗೆ ವರ್ಗಾಯಿಸಬೇಕೆಂದು ವೀರ ಕನ್ನಡಿಗರ ಸೇನೆ ಆಗ್ರಹಿಸಿದೆ.
ನಗರದ ಉಪ ನೋಂದಣಾಧಿಕಾರಿ, ಮಹಾನಗರ ಪಾಲಿಕೆ, ತಾಲೂಕು ದಂಡಾಧಿಕಾರಿ, ಸರ್ಕಾರಿ ಹಿರಿಯ ಹಾಗೂ ಪ್ರಾಥಮಿಕ ಶಾಲಾ- ಕಾಲೇಜುಗಳು, ಪ್ರಾದೇಶಿಕ ಸಾರಿಗೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಹಾಗೂ ನಗರ ಪೊಲೀಸ್ ಕಚೇರಿಗಳಲ್ಲಿ ಸರ್ಕಾರದ ನಿಯಮದಂತೆ ಕನಿಷ್ಠ ಮೂರು ವರ್ಷದಿಂದ ಐದು ವರ್ಷ ಸೇವೆ ಸಲ್ಲಿಸಿದ ಸಾಕಷ್ಟು ಅಧಿಕಾರಿಗಳಿದ್ದಾರೆ ಎಂದು ತಿಳಿಸಿದೆ.
ಅಭಿವೃದ್ಧಿ ಸಲುವಾಗಿ ವರ್ಗಾಯಿಸಿ: ನಗರ ಮತ್ತು ಜಿಲ್ಲೆಗಳ ಅಭಿವೃದ್ಧಿಯಾಗಲು ಹಾಗೂ ಬಡವರಿಗೆ ಮೂಲ ಸೌಲಭ್ಯಗಳು ದೊರಕಬೇಕಾದರೆ ಈ ಅಧಿಕಾರಿಗಳು ಮತ್ತು ನೌಕರರ ವರ್ಗಾವಣೆಯಾಗಬೇಕು. ಆದ್ದರಿಂದ ಅಧಿಕಾರಿಗಳಿಗೆ ತಕ್ಷಣ ವರ್ಗಾಯಿಸಬೇಕು ಎಂದು ಸೇನೆಯು ಜಿಲ್ಲಾಧಿಕಾರಿಗಳು ಮೂವಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.
ಈ ವೇಳೆ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿದ್ದು ಕಂದಗಲ್, ಜಿಲ್ಲಾ ಕಾರ್ಯಾಧ್ಯಕ್ಷ ರವಿ ಒಂಟಿ, ಜಿಲ್ಲಾ ಉಪಾಧ್ಯಕ್ಷ ದತ್ತು ಬಾಸಗಿ, ತಾಲೂಕಾಧ್ಯಕ್ಷ ಸಂತೋಷ ತಳವಾರ, ಶಿವಾಜಿ ಚವ್ಹಾಣ, ಅಮಿತ ಪಾಟೀಲ್, ಅಬ್ದುಲ್ ವಾಜೀದ್ ಖಾನ್, ಸುನಿಲ್ ಚವ್ಹಾಣ, ರಾಮಾ ಪೂಜಾರಿ, ಪ್ರಶಾಂತ ಚವ್ಹಾಣ ಸೇರಿದಂತೆ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.