ನಕಲಿ ಪಡಿತರ ಚೀಟಿದಾರರ ವಿರುದ್ಧ ಪ್ರಕರಣ ದಾಖಲಿಸಿ: ಶಾಸಕ ಜಾಧವ
ಕನ್ನಡಪ್ರಭ ವಾರ್ತೆ, ಚಿಂಚೋಳಿ, ಜೂ.2
1 ರು. ಅಕ್ಕಿ ಯೋಜನೆ ಬರುವ ಜುಲೈ ತಿಂಗಳಲ್ಲಿ ಜಾರಿಗೆ ಬರಲಿದ್ದು, ನಕಲಿ ಚೀಟಿದಾರರಿಗೆ ಅಕ್ಕಿ ನೀಡಬಾರದು. ನಕಲಿ ಪಡಿತರ ಚೀಟಿ ಹೊಂದಿರುವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಶಾಸಕ ಡಾ. ಉಮೇಶ ಜಾಧವ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಕೊಟಗಾ ಗ್ರಾಮದಲ್ಲಿ ಇತ್ತೀಚೆಗೆ ಜರುಗಿದ ಜನಸ್ಪಂದನಾ ಸಭೆಯಲ್ಲಿ ಮಾತನಾಡಿ, ಜನರ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸದಿದ್ದರೆ ಅಧಿಕಾರಿಗಳೇ ಹೊಣೆಗಾರರಾಗಬೇಕಾಗುತ್ತದೆ ಎಂದರು.
ಗ್ರಾಮೀಣ ಪ್ರದೇಶದ ಜನರು ಅಧಿಕಾರಿಗಳಿಗೆ ಅಭಿವೃದ್ಧಿ ಬಗ್ಗೆ ಸಹಕಾರ ನೀಡಬೇಕು. ತಾಲೂಕಿನ ಸಮಸ್ಯೆಗಳ ಬಗ್ಗೆ ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಸಭೆಯನ್ನು ಮುಂದಿನ ವಾರದಲ್ಲಿ ನಡೆಸಿ ಇಲ್ಲಿನ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಸರ್ಕಾರದಿಂದ ಪರಿಹಾರ ನೀಡುವುದಾಗಿ ಹೇಳಿದರು.
ಮುಂಗಾರು ಬಿತ್ತನೆ ದಿನಗಳು ಸಮೀಪಿಸುತ್ತಿವೆ. ರೈತರಿಗೆ ಅನುಕೂಲವಾಗುವಂತೆ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಮತ್ತು ಗೊಬ್ಬರ ಲಭ್ಯವಿರಬೇಕು. ಅಧಿಕಾರಿಗಳು ಜಾಗೃತರಾಗಿ ಕೆಲಸ ನಿರ್ವಹಿಸಬೇಕಾಗಿದೆ ಎಂದ ಅವರು, ತಾಲೂಕಿನಿಂದ ಬೇರೆ ಕಡೆ ನಿಯೋಜನೆ ಮೇಲೆ ಕೆಲಸ ಮಾಡುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿ ಮಾಹಿತಿ ನೀಡಬೇಕೆಂದು ತಹಸೀಲ್ದಾರ್ ಮೋಹನ ಜೋಶಿ ಅವರಿಗೆ ಹೇಳಿದರು.
ಕೊಟಗಾ ಗ್ರಾಮದ ಪ್ರಮುಖರಾದ ಖಾಜಾಪಟೇಲ್, ನವಾಜ ಪಟೇಲ್ ಮತ್ತು ಸದಾನಂದ ಕೊಟಗಾ ಅವರು ಮಾತನಾಡಿ, ಕೊಟಗಾ ಗ್ರಾಮವು ಮುಲ್ಲಾಮಾರಿ ನದಿಗೆ ಅತಿ ಹತ್ತಿರವಾಗಿದ್ದು ಮಳೆಗಾಲದಲ್ಲಿ ನದಿ ತುಂಬಿ ಹರಿಯುತ್ತಿದೆ. ಗ್ರಾಮವನ್ನು ಮುಳುಗಡೆ ಪ್ರದೇಶವೆಂದು ಘೋಷಿಸಬೇಕು ಎಂದು ಶಾಸಕರ ಗಮನಕ್ಕೆ ತಂದರು.
ತಹಸೀಲ್ದಾರ್ ಜಗನ್ನಾಥರೆಡ್ಡಿ ಧರ್ಮರೆಡ್ಡಿ, ಎಇಇ ರೇವಣಸಿದ್ದಪ್ಪ, ಅಶೋಕ ಮಹೇಂದ್ರಕರ್, ರಾಜಶೇಖರ ಗಾರಂಪಳ್ಳಿ, ಪರಮೇಶ್ವರ ಬಿರಾದಾರ, ಡಾ. ಧನರಾಜ ಬೊಮ್ಮ, ಬಾಲಕೃಷ್ಣ ಮುದುಕಣ್ಣ, ಅಧಿಕಾರಿಗಳು ಹಾಜರಿದ್ದರು.
ಶಾಸಕ ಡಾ. ಉಮೇಶ ಜಾಧವ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಮೊದಲ ಜನಸ್ಪಂದನಾ ಸಭೆಯಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿ, ಕೆಳದಂಡೆ ಮುಲ್ಲಾಮಾರಿ ಯೋಜನೆ ಕಾರ್ಯನಿರ್ವಾಹಕ ಎಂಜಿನಿಯರ್, ಬಿಸಿಎಂ, ಸಮಾಜ ಕಲ್ಯಾಣ ಅಧಿಕಾರಿ, ಕೃಷಿ ಅಧಿಕಾರಿ, ಗೈರಾಗಿದ್ದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರಿಂದ ಅಹವಾಲು ಸ್ವೀಕರಿಸಿದರು. ತಾಪಂ ಅಧಿಕಾರಿ ಜಗದೇವ ಬೈಗೊಂಡ ಸ್ವಾಗತಿಸಿದರು. ಎಸ್.ಎ. ಮಂಜುನಾಥ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

