ಡೆಂಘೀ ನಿಯಂತ್ರಣಕ್ಕೆ ಮುನ್ನೆಚ್ಚರಿಕೆಯೇ ಮದ್ದು, ಸ್ವಚ್ಫತೆ ಕಾಪಾಡಿ: ಜಿಲ್ಲಾಧಿಕಾರಿ
ಕನ್ನಡಪ್ರಭ ವಾರ್ತೆ ಯಾದಗಿರಿ ಜೂ.3
ರಾಜ್ಯಾದ್ಯಂತ ಡೆಂಘೀ ಜ್ವರ ವ್ಯಾಪಿಸುತ್ತಿದೆ. ಆದ್ದರಿಂದ ಜಿಲ್ಲೆಯಲ್ಲಿ ಎಚ್ಚರವಹಿಸಿ ಈ ರೋಗಕ್ಕೆ ಕಾರಣವಾಗಿರುವ ಸೊಳ್ಳೆಯ ನಿಯಂತ್ರಣಕ್ಕಾಗಿ ಎಲ್ಲರೂ ಸ್ವಚ್ಛತೆ ಕಾಪಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಎಫ್.ಆರ್. ಜಮಾದಾರ್ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಡೆಂಘೀ ಜ್ವರ ನಿಯಂತ್ರಣ ಮುನ್ನೆಚ್ಚರಿಕೆ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಡೆಂಘೀ ಜ್ವರ ವೈರಸ್‌ನಿಂದ ಉಂಟಾಗುವ ಕಾಯಿಲೆಯಾಗಿದೆ. ಇದು ಸೋಂಕು ಹೊಂದಿದ ಈಡಿಸ್ ಈಜಿಪ್ಟೈ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಸಾಮಾನ್ಯವಾಗಿ ಈ ಸೊಳ್ಳೆಗಳು ಸ್ವಚ್ಛ ನೀರಿನಲ್ಲಿ ಸಂತಾನಾಭಿವೃದ್ಧಿ ಮಾಡುವ ಹಿನ್ನೆಲೆಯಲ್ಲಿ ಎಲ್ಲರೂ ನೀರಿನ ಸ್ವಚ್ಛತೆ ಬಗ್ಗೆ ಜಾಗೃತಿ ವಹಿಸುವಂತೆ ಸಲಹೆ ನೀಡಿದರು.
ಮುನ್ನೆಚ್ಚರಿಕೆಯೇ ಔಷಧಿ, ಲಸಿಕೆ: ಸಂಬಂಧಿಸಿದ ಅಧಿಕಾರಿಗಳು ಈ ಕುರಿತು ಜಾಗೃತಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ಡೆಂಘೀ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲದ್ದರಿಂದ ಈ ರೋಗದ ಲಕ್ಷಣ ಕಂಡು ಬಂದ ತಕ್ಷಣ ಸೂಕ್ತ ಚಿಕಿತ್ಸೆ ಪಡೆಯಬೇಕು. ಈ ರೋಗದ ಹತೋಟಿಗೆ ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲುಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿ, ಡ್ರಮ್, ಬ್ಯಾರೆಲ್, ಮಣ್ಣಿನ ಮಡಿಕೆಗಳಲ್ಲಿ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಬೇಕು. ಸಾರ್ವಜನಿಕರು ಮತ್ತು ಅಧಿಕಾರಿಗಳು ಈ ಕುರಿತು ಎಚ್ಚರವಹಿಸಲು ಅವರು ಸಲಹೆ ನೀಡಿದರು.
ಈ ವರ್ಷ ಪತ್ತೆಯಾಗಿಲ್ಲ: ಡೆಂಘೀ ಜ್ವರದ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಲ್ಲಿಕಾರ್ಜುನ ಮುಕ್ಕಾ, ಡೆಂಘೀ ಜ್ವರ ನಿಯಂತ್ರಣಕ್ಕೆ ನೀರು ಶೇಖರಣಾ ತೊಟ್ಟಿಗಳನ್ನು ಭದ್ರವಾಗಿ ಮುಚ್ಚಬೇಕು. ಜಿಲ್ಲೆಯಲ್ಲಿ ಕಳೆದ ವರ್ಷ 15 ಪ್ರಕರಣ ಪತ್ತೆಯಾಗಿದ್ದವು. ಈ ವರ್ಷ ಈವರೆಗೆ ಜಿಲ್ಲೆಯಲ್ಲಿ ಯಾವುದೇ ಡೆಂಘೀ ಪ್ರಕರಣ ಪತ್ತೆಯಾಗಿಲ್ಲ. ಕಾರಣ ಈ ರೋಗ ನಿಯಂತ್ರಣಕ್ಕೆ ಎಲ್ಲರೂ ನೀರು ಮತ್ತು ಪರಿಸರ ಸ್ವಚ್ಛತೆಗೆ ಪ್ರಥಮ ಆದ್ಯತೆ ನೀಡುವಂತೆ ಸಲಹೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

