ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಸೂಚನೆ
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜೂ.3
ಜಿಲ್ಲೆಯಲ್ಲಿ ಮುಂಗಾರು ಕಾಲಿಟ್ಟಿದ್ದು, ರೈತಾಪಿ ವರ್ಗದವರು ಕೃಷಿ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಅವರಿಗೆ ಕೃಷಿ ಇಲಾಖೆಯಿಂದ ರಸಗೊಬ್ಬರ ಹಾಗೂ ಬಿತ್ತನೆ ಬೀಜಗಳ ವಿತರಣೆಯನ್ನು ಸಮರ್ಪಕವಾಗಿ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಪ್ರಸನ್ನಕುಮಾರ್ ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯ್ತಿ ಹಳೇ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅನುಮತಿ ಇಲ್ಲದ ರಜೆ ಸಲ್ಲ: ಎರಡು ತಿಂಗಳವರೆಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಪೂರೈಕೆಯೊಂದಿಗೆ ಇತರೆ ಕೃಷಿ ಚಟುವಟಿಕೆಗಳತ್ತ ಎಲ್ಲರೂ ಗಮನಹರಿಸಬೇಕು. ಈ ಹಂತದಲ್ಲಿ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಅನುಮತಿ ಇಲ್ಲದೆ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಹಾಗೂ ರಜೆಯನ್ನು ತೆಗೆದುಕೊಳ್ಳತಕ್ಕದ್ದಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಾಕಷ್ಟು ಗೊಂದಲ ಸೃಷ್ಟಿ: ಎಲ್ಲಕ್ಕಿಂತ ಮುಖ್ಯವಾಗಿ ಖಾಸಗಿಯಾಗಿ ಬಿತ್ತನೆ ಬೀಜ ಖರೀದಿಸುವ ಹಂತದಲ್ಲಿ ಬಿತ್ತನೆ ಬೀಜಗಳ ಹಳೇ ಸಂಗ್ರಹ ಹಾಗೂ ಹೊಸ ಸಂಗ್ರಹವೆಂಬ ನಮೂನೆಯನ್ನು ಸೃಷ್ಟಿಸಿ ಅದಕ್ಕೆ ತಕ್ಕಂತೆ ಹಳೆ ಹಾಗೂ ಹೊಸ ದರವನ್ನು ನಮೂದಿಸಿ ಮಾರಾಟ ಮಾಡುವ ಯತ್ನ ಮಾಡಲಾಗುತ್ತದೆ. ಇದು ಸಾಕಷ್ಟು ಗೊಂದಲ ಸೃಷ್ಟಿಸುವುದು. ಇದರ ನಿವಾರಣೆಗೆ ಸರ್ಕಾರ ನಿಗಧಿ ಮಾಡಿದ ದರವನ್ನು ಪ್ರಕಟಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಬಳತ್ಕರ್ ಅವರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಅಲ್ಲದೆ ಈ ಸಂದರ್ಭದಲ್ಲಿ ಅಕ್ರಮ ಎಸಗುವವರ ಮೇಲೆ ಕಣ್ಣಿಡಲು ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು. ಕೃಷಿ ಸಂಬಂಧಿತ ಸಮಸ್ಯೆಗಳಿರುವ ಪ್ರದೇಶಗಳಲ್ಲಿ ಅದರ ನಿವಾರಣೆಗೆ ಸದಾ ಸಿದ್ಧರಾಗಿರುವಂತೆ ಪ್ರಸನ್ನಕುಮಾರ್ ಅಧಿಕಾರಿಗಳಿಗೆ ತಿಳಿಸಿದರು.
ಜಿಪಂ ಸಿಇಒ ಪಲ್ಲವಿ ಆಕುರಾತಿ, ಉಪ ಕಾರ್ಯದರ್ಶಿ ವಸಂತ ಕುಲಕರ್ಣಿ, ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಶಂಕರಶೆಟ್ಟಿ ಮಾಲೀಪಾಟೀಲ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

