ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಕರವೇ ಆಗ್ರಹ
ಕನ್ನಡಪ್ರಭ ವಾರ್ತೆ, ಚಿತ್ತಾಪುರ, ಜೂ.3
ತಾಲೂಕಿನ ಇಟಗಾ, ಮೋಗಲಾ, ದಿಗ್ಗಾಂವ ಗ್ರಾಮಗಳಲ್ಲಿ ಉದ್ದೇಶಿತ ಓರಿಯಂಟಲ್ ಸಿಮೆಂಟ್ ಕಂಪನಿಯವರು ರೈತರಿಂದ ಖರೀದಿಸಿದ ಜಮೀನುಗಳನ್ನು ಎನ್.ಎ. ಮಾಡಿಸದೆ ಕಂಪನಿಯ ಕಾಮಗಾರಿ ಪ್ರಾರಂಭ ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕರವೇ (ಪ್ರವೀಣ ಶೆಟ್ಟಿ) ಬಣದ ತಾಲೂಕು ಅಧ್ಯಕ್ಷ ನರಹರಿ ಕುಲಕರ್ಣಿ ಒತ್ತಾಯಿಸಿದ್ದಾರೆ.
ಲೋಕಾಯುಕ್ತರು ಬೆಂಗಳೂರು ಇವರಿಗೆ ಬರೆದ ಪತ್ರವನ್ನು ತಹಸೀಲ್ದಾರ್ ಮಲ್ಲೇಶ ತಂಗಾ ಅವರ ಮೂಲಕ ಸಲ್ಲಿಸಿ, ಜನ ಸಾಮಾನ್ಯರು ಪರವಾನಿಗೆ ಪಡೆಯದೇ ಮನೆ ಕಟ್ಟಿದರೆ ಅದನ್ನು ನೆಲಸಮ ಮಾಡಲಾಗುತ್ತದೆ. ಆದರೆ ಇಲ್ಲಿ ಅಧಿಕಾರಿಗಳ ಎದುರೆ ಕಾರ್ಖಾನೆ ಕಾಮಗಾರಿ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವುದು ಅಲ್ಲದೇ ಕಾಮಗಾರಿಗೆ ಸ್ಥಳೀಯರನ್ನು ನೇಮಿಸಿಕೊಳ್ಳದೇ ಹೊರ ರಾಜ್ಯದಿಂದ ತಂದು ಕಾಮಗಾರಿ ಮಾಡುತ್ತಿರುವುದು ಕನ್ನಡಿಗರಿಗೆ ಹಾಗೂ ಸ್ಥಳೀಯರಿಗೆ ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿದ್ದಾರೆ.
ಇಟಗಾ, ಮೊಗಲಾ, ದಿಗ್ಗಾಂವ ಗ್ರಾಮದ ರೈತರಿಗೆ ಭೂಮಿ ಖರೀದಿಯಲ್ಲಿ ಆಗಿರುವ ತಾರತಮ್ಯ ಸರಿಪಡಿಸಬೇಕು. ಇಲ್ಲದಿದ್ದರೆ ಉಚ್ಚ ನ್ಯಾಯಲಯಕ್ಕೆ ಹೋಗುವ ಮೂಲಕ ಹೋರಾಟವನ್ನು ತೀವ್ರಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

