ಗುಲ್ಬರ್ಗಾ

ಇಂದಿನಿಂದ ಸಿಇಟಿ ಪ್ರಮಾಣ ಪತ್ರಗಳ ಪರಿಶೀಲನೆ

Published On :

ಗುಲ್ಬರ್ಗ: ಗುಲ್ಬರ್ಗದ ವಿಟಿಯು ಪ್ರಾದೇಶಿಕ ಕೇಂದ್ರದಲ್ಲಿ 2013-14ನೇ ಸಾಲಿನ ಸಿಇಟಿ ತೇರ್ಗಡೆಯಾದ ವಿದ್ಯಾರ್ಥಿಗಳ ದಾಖಲಾತಿಗಳ ಪರಿಶೀಲನೆ ಕಾರ್ಯ ಜೂನ್ 5ರಿಂದ 23ರವರೆಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6.15ರವರೆಗೆ ನಡೆಯಲಿದೆ. ಈ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲವಿ ಆಕುರಾತಿ ಅವರು ಜೂನ್ 5ರಂದು ಬೆಳಗ್ಗೆ 9 ಗಂಟೆಗೆ ಉದ್ಘಾಟಿಸಲಿದ್ದಾರೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎಂ. ಸಾಳುಂಕೆ ಅಧ್ಯಕ್ಷತೆ ವಹಿಸುವರು. ವಿಟಿಯು ಪ್ರಾದೇಶಿಕ ಕೇಂದ್ರದ ವಿಶೇಷ ಅಧಿಕಾರಿ ಡಾ. ಪ್ರವೀಣ ಹುನುಗುಂಟಿಕರ್ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಎ.ಎಚ್. ಯಲಿಮನಿ ಅವರು ಗೌರವ ಅತಿಥಿಗಳಾಗಿ ಪಾಲ್ಗೊಳ್ಳುವರು.
8ರಂದು ವೈದ್ಯಕೀಯ
ಮೌಲ್ಯಾಂಕ ಶಿಬಿರ
ಗುಲ್ಬರ್ಗ: ನಗರದ ಪ್ರಾತ್ಯಕ್ಷಿತ(ಪ್ರ್ಯಾಕ್ಟಿಸಿಂಗ್) ಪ್ರೌಢಶಾಲೆಯಲ್ಲಿ 2013-14ನೇ ಸಾಲಿನ ವಿಶೇಷ ಅಗತ್ಯವುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಜೂ. 8ರಂದು ಬೆ.9ರಿಂದ ಸಂಜೆ 5ರವರೆಗೆ ಹಮ್ಮಿಕೊಳ್ಳಲಾಗಿದೆ. ದಕ್ಷಿಣ ವಲಯದ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಶಾಲಾಧಾರಿತ, ಗೃಹಾಧಾರಿತ 6ರಿಂದ 14 ವರ್ಷದ ಮಕ್ಕಳನ್ನು(ವಿಕಲಚೇತನ) ಕರೆದಂದು ಶಿಬಿರದ ಪ್ರಯೋಜನವನ್ನು ಪಡೆಯಲು ಗುಲ್ಬರ್ಗ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆ ಮೂಲಕ ಕೋರಿದ್ದಾರೆ.
ನಾಳೆ ನೇರ ಫೋನ್
ಇನ್ ಕಾರ್ಯಕ್ರಮ
ಗುಲ್ಬರ್ಗ: ಗುಲ್ಬರ್ಗದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಭೂಗರ್ಭ ವಿಜ್ಞಾನ ನಿಕಾಯದ ಡೀನ್ ಪ್ರೊ. ಸೈಯದ್ ಅಷ್ಫಾಕ್ ಅಹ್ಮದ್ ಅವರು ಆಲ್ ಇಂಡಿಯಾ ರೇಡಿಯೋ(ಆಕಾಶವಾಣಿ)ದಲ್ಲಿ ಜೂ.6ರ ಬೆ.10ರಿಂದ 1 ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸವವರು. ವಿವಿ ವಿವಿಧ ಕೋರ್ಸ್‌ಗಳ ಪ್ರವೇಶಾತಿ ಬಗ್ಗೆ ಮಾಹಿತಿ ಪಡೆಯಲು ದೂ. 08472- 241853, 241854ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದು.
17ರಂದು ಕೆಡಿಪಿ ಸಭೆ
ಗುಲ್ಬರ್ಗ: ಜಿಲ್ಲಾ ಉಸ್ತುವಾರಿ ಹಾಗೂ ಪೌರಾಡಳಿತ, ಸಾರ್ವಜನಿಕ ಉದ್ದಿಮೆ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಇಲಾಖೆ ಸಚಿವ ಖಮರುಲ್ ಇಸ್ಲಾಂ ಅವರು ಜೂ.17ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
ಎತ್ತುವಳಿಗೆ ಸೂಚನೆ
ಗುಲ್ಬರ್ಗ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಈಗಾಗಲೇ ಪ್ರಾರಂಭವಾಗಿದ್ದು, ತಾಲೂಕಿನ ಎಲ್ಲ ಸಹಕಾರ ಸಂಘಗಳು ಜೂ.7ರೊಳಗಾಗಿ ರಸಗೊಬ್ಬರ ಎತ್ತುವಳಿ ಮಾಡಿ ದಾಸ್ತಾನು ಮಾಡಿ ಇಟ್ಟುಕೊಳ್ಳಬೇಕು ಎಂದು ಗುಲ್ಬರ್ಗ ಸಹಾಯಕ ಕೃಷಿ ನಿರ್ದೇಶಕ ಚಂದ್ರಕಾಂತ ಜೀವಣಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.