ಗುಲ್ಬರ್ಗಾ

ಚರಂಡಿ ಹೂಳೆತ್ತಲು ಕ್ರಮ: ಡಿಸಿ

Published On :

ಯಾದಗಿರಿ: ನಗರದ ವಿವಿಧ ವಾರ್ಡುಗಳಲ್ಲಿ ಚರಂಡಿ ಹೂಳೆತ್ತುವ ಕಾಮಗಾರಿಯನ್ನು ಆರಂಭಿಸಲಾಗಿದ್ದು, ರಸ್ತೆ ಹಾಗೂ ಇನ್ನಿತರ ಮೂಲ ಸೌಲಭ್ಯ ಕಲ್ಪಿಸಲು ಕ್ರಮ ಶೀಘ್ರ ಕೈಗೊಳ್ಳಲು ಪೌರಾಯುಕ್ತರಿಗೆ ಸೂಚಿಸಲಾಗಿದೆ ಎಂದು ಡಿಸಿ ಜಮಾದಾರ ತಿಳಿಸಿದ್ದಾರೆ. 'ಕನ್ನಡಪ್ರಭ'ದಲ್ಲಿ ಸೋಮವಾರ ಪ್ರಕಟವಾಗಿರುವ 'ಚರಂಡಿ ತುಂಬ ಹೂಳು, ಮಳೆ ಬಂದರೆ ಗೋಳು' ಎಂಬ ತಲೆಬರೆಹದ ವರದಿಗೆ ಪ್ರತಿಕ್ರಿಯಿಸಿದ ಅವರು, ಬಸವೇಶ್ವರ ನಗರದಲ್ಲಿ ಚರಂಡಿ ಇಲ್ಲದೇ ಇರುವ ವಿಷಯ ಗಮನಕ್ಕೆ ಬಂದಿದೆ. ಅದಕ್ಕಾಗಿ ಜಿಲ್ಲಾ ಕೇಂದ್ರ ಅಭಿವೃದ್ಧಿಗೆ ಬಂದ 30 ಕೋಟಿಯಲ್ಲಿ 2.75 ಕೋಟಿಯನ್ನು ಈ ಕಾರ್ಯಕ್ಕಾಗಿ ಮೀಸಲಿಡಲಾಗಿದೆ ಎಂದು ತಿಳಿಸಿದರು.
ಪೌರಾಯುಕ್ತ ಮುನೀರ್ ಅಹ್ಮದ್ ಪ್ರತಿಕ್ರಿಯಿಸಿ, ಈಗಾಗಲೇ ಹೂಳೆತ್ತುವ ಕಾಮಗಾರಿ ಆರಂಭಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆಯಂತೆ ನಾಲಾ ಸ್ವಚ್ಛತೆಗೆ ಯಂತ್ರ ಖರೀದಿಸಲಾಗಿದೆ. ಸುಮಾರು 25 ಲಕ್ಷ ವೆಚ್ಚದಲ್ಲಿ ಚರಂಡಿ, ರಸ್ತೆ ದುರಸ್ತಿ ಇತ್ಯಾದಿ ಕಾಮಗಾರಿ ನಿರ್ವಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಈ ಬಗ್ಗೆ ಕ್ರಿಯಾಯೋಜನೆ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.  ತುರ್ತು ಕಾಮಗಾರಿ ನಿರ್ವಹಿಸುವಂತೆ ಅವರು ಸೂಚಿಸಿದ್ದು, ಅಗತ್ಯ ಅನುದಾನ ಬಿಡುಗಡೆ ಮಾಡಿಕೊಡುವುದಾಗಿಯೂ ತಿಳಿಸಿದ್ದಾರೆ. ಆದ್ದರಿಂದ ಶೀಘ್ರದಲ್ಲಿ ಎಲ್ಲಾ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತರು ಸ್ಪಷ್ಟನೆ ನೀಡಿದ್ದಾರೆ.
--
ಅನಿರೀಕ್ಷಿತ ಭೇಟಿ, 3 ಶಿಕ್ಷಕರು ಗೈರು
ಶಹಾಪುರ: ಸರ್ವ ಶಿಕ್ಷಣ ಅಭಿಯಾನ ಬೆಂಗಳೂರು ಕಾರ್ಯಾಲಯದ ಸ. ನಿರ್ದೇಶಕ ಬಸವರಾಜಯ್ಯ ಶಹಾಪುರಕ್ಕೆ ಅನಿರೀಕ್ಷಿತ ಭೇಟಿ ನೀಡಿ ತಾಲೂಕಿನ ಹಲವು ಶಾಲೆಗಳನ್ನು ಸಂದರ್ಶಿಸಿದಾಗ 3 ಶಿಕ್ಷಕರು ಅನಧಿಕೃತ ಗೈರು ಹಾಜರಾಗಿರುವುದು ಪತ್ತೆಯಾಗಿದೆ. ಯಕ್ಷಿಂತಿ ಶಾಲೆ, ಬೀರನೂರ ಶಾಲೆ ಮತ್ತು ತಾಂಡಾ ಪ್ರಾಥಮಿಕ ಶಾಲೆಯ ತಲಾ ಒಬ್ಬ ಶಿಕ್ಷಕರು ಪೂರ್ವಾನುಮತಿ ಇಲ್ಲದೆ ಗೈರು ಹಾಜರಿ ಇರುವುದು ಕಂಡುಬಂತು. ತಕ್ಷಣವೇ ಸಂಬಂಧಪಟ್ಟ ಶಿಕ್ಷಕರಿಗೆ ಷೋಕಾಸ್ ನೋಟಿಸ್ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.