ಗುಲ್ಬರ್ಗಾ

ಕಾಯಕ ಪ್ರಜ್ಞೆ ಹುಟ್ಟು ಹಾಕಿದವರು ಬಸವಣ್ಣ

Published On :

ಶಹಾಪುರ: ಬಸಸವಣ್ಣ ಬರುವ ಪೂರ್ವದಲ್ಲಿ ಕಾಯಕಕ್ಕೆ ಕೀಳು ಮಟ್ಟದ ಸ್ಥಾನ ಕಲ್ಪಿಸಲಾಗಿತ್ತು ಎಂದು ಸಾಹಿತಿ ವಿಶ್ವನಾಥರೆಡ್ಡಿ ಗೊಂದಡಗಿ ಹೇಳಿದರು. ಶಹಾಪುರದ ಡಾ. ಬಸವರಾಜ ಇಜೇರಿಯವರ ಮನೆಯಲ್ಲಿ ಬಸವಮಾರ್ಗ ಪ್ರತಿಷ್ಠಾನದ ವತಿಯಿಂದ ನಡೆದ 153ನೇ ಮನೆಯಲ್ಲಿ ಮಹಾಮನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸಾಹಿತಿ ಚಂದ್ರಕಾಂತ ಕರದಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಣ್ಣ ಇಜೇರಿ ಸ್ವಾಗತಿಸಿದರು. ಕುಮಾರಿ ಅಂಬಿಕಾ ಹಾಗೂ ರೇಣುಕಾ ವಚನ ಗಾಯನ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೃತ್ಯುಂಜಯ ಸ್ವಾಮಿ ಚಿಕ್ಕಮಠ ವಹಿಸಿದ್ದರು. ಸಿದ್ದು ಮ್ಯಾಗಿನ ಮನೆ ನಿರೂಪಿಸಿದರು. ಶರಣು ಯಡ್ರಾಮಿ ವಂದಿಸಿದರು. ಮಲ್ಲಿಕಾರ್ಜುನ ಹೂಗಾರ, ಬಸವರಾಜ ಹೇರುಂಡಿ, ಗುರುಬಸವಯ್ಯ ಗದ್ದುಗೆ, ನಾಗಣ್ಣ ಬುಗಿಷ್ಟಿಗಾರ, ಸಾಯಿಬಣ್ಣ ಮಡಿವಾಳ ಇತರರು ಇದ್ದರು.
ವಿವಿಧ ಕೋರ್ಸುಗಳಿಗೆ ಪ್ರವೇಶ ಆರಂಭ
ಯಾದಗಿರಿ: ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ 2013- 14ನೇ ಸಾಲಿಗಾಗಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪ್ರಾರಂಭವಾಗಿದ್ದು, ಅರ್ಹ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ ತಿಳಿಸಿದ್ದಾರೆ. ಬಿಎ, ಬಿಕಾಂ, ಬಿಸಿಎ, ಬಿಬಿಎಂ, ಬಿಎಸ್ಸಿ ಕೋರ್ಸ್‌ಗಳಿಗೆ ದ್ವಿತೀಯ ಪಿಯುಸಿ ಉತ್ತೀರ್ಣರಾದ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು. ಜೂ.1ರಿಂದ ಪ್ರವೇಶ ಪ್ರಾರಂಭವಾಗಿದ್ದು, ದಂಡ ಶುಲ್ಕವಿಲ್ಲದೆ ಜೂ.25ರ ವರೆಗೆ ಪ್ರವೇಶ ಪಡೆಯಬಹುದು. ಕಾಲೇಜಿನಲ್ಲಿ ನುರಿತ ಅಧ್ಯಾಪಕರಿದ್ದು, ಸುಸಜ್ಜಿತವಾದ ಪ್ರಯೋಗಾಲಯ, ವ್ಯವಸ್ಥಿತವಾದ ಗ್ರಂಥಾಲಯ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಉತ್ತಮ ಬೋಧನಾ ವ್ಯವಸ್ಥೆ ಕಲ್ಪಿಸಲಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.