ಜಿಲ್ಲಾದ್ಯಂತ ಗುಟ್ಕಾ, ಪಾನ್ ಮಸಾಲ ನಿಷೇಧ: ಡಿಸಿ
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಜೂ.5
ಜಿಲ್ಲಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತಂಬಾಕು ಮತ್ತು ನಿಕೋಟಿನ್ ಘಟಕಾಂಶಗಳನ್ನು ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲ ಹಾಗೂ ಇತರೆ ಯಾವುದೇ ಹೆಸರಿನಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಗುಟ್ಕಾ ಮತ್ತು ಪಾನ್ ಮಸಾಲ ಪದಾರ್ಥಗಳ ತಯಾರಿಕೆ ಸಂಗ್ರಹಣೆ, ಮಾರಾಟ ಹಾಗೂ ವಿತರಣೆಯನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ನ್ಯಾಯ ನಿರ್ಣಯ ಅಧಿಕಾರಿಗಳೂ ಆದ ಅಪರ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ-2006ರ ಅನ್ವಯ ತಂಬಾಕು ಮತ್ತು ನಿಕೋಟಿಕ್ ಘಟಕಾಂಶಗಳನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ನಿಷೇಧಿಸಿದೆ. ಗುಟ್ಕಾ ಮತ್ತು ಪಾನ್ ಮಸಾಲಗಳು, ತಂಬಾಕು ಮತ್ತು ನಿಕೋಟಿನ್ ಘಟಕಾಂಶಗಳನ್ನು ಒಳಗೊಂಡ ಆಹಾರ ಪದಾರ್ಥಗಳಾಗಿವೆ. ಇವುಗಳನ್ನು ನಿಷೇಧಿಸಬೇಕಿದೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಲ್ಲಿನ ಉಪಬಂಧಗಳನ್ನು ಮತ್ತು ಅದರಡಿಯಲ್ಲಿ ರಚಿತವಾಗಿರುವ ನಿಯಮಾವಳಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಗುಲ್ಬರ್ಗ ಜಿಲ್ಲೆಯಲ್ಲಿ ಅಂಕಿತ ಅಧಿಕಾರಿಗಳನ್ನು ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಮತ್ತು ಪಾನ್ ಮಸಾಲ ಮಾರಾಟ, ಸಂಗ್ರಹಣೆ ಮತ್ತು ವಿತರಣೆ ಕಂಡುಬಂದಲ್ಲಿ ಜಿಲ್ಲಾ ಅಂಕಿತ ಅಧಿಕಾರಿಗಳು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿಗಳು, ಜಿಲ್ಲಾ ಸಮೀಕ್ಷಣಾ ಘಟಕ, ಜಿಲ್ಲಾ ಆಸ್ಪತ್ರೆ ಆವರಣ, ಗುಲ್ಬರ್ಗ ಹಾಗೂ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ದೂರು ಸಲ್ಲಿಸಬಹುದು ಎಂದು ಅಪರ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯ ನಿರ್ಣಯ ಅಧಿಕಾರಿಗಳು ತಿಳಿಸಿದ್ದಾರೆ.
ಪಾಟೀಲ್ ಸ್ವಾಗತ
ಗುಲ್ಬರ್ಗ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಟ್ಕಾ ಮಾರಾಟ ನಿಷೇಧ ಮಾಡಿರುವುದು ಸ್ವಾಗತಾರ್ಹ ಕ್ರಮ ಎಂದು ಮಾಜಿ ಶಾಸಕ ಕೈಲಾಸನಾಥ ವಿ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಸುಪ್ರಿಂಕೋರ್ಟ್‌ನ ನಿರ್ದೇಶನದಂತೆ ಗುಟ್ಕಾ ಮಾರಾಟ ನಿಷೇಧ ಕ್ರಮ ಕೈಗೊಂಡಿದೆ. ಗುಟ್ಕಾ -ತಂಬಾಕು ಕದ್ದುಮುಚ್ಚಿ ಮಾರಾಟ ಮಾಡುವುದು, ಎಲ್ಲ ತರಹದ ಸಾರ್ವಜನಿಕ ಸ್ಥಳಗಳಲ್ಲಿ ಗುಟ್ಕಾ ತಿನ್ನುವುದು ಕಂಡು ಬಂದಾಗ ದಂಡ ವಿಧಿಸಿದರೆ ತಿನ್ನುವವರ ಸಂಖ್ಯೆ ಕೂಡಲೇ ಕಡಿಮೆಯಾಗುತ್ತದೆ ಎಂದು ಆರೋಗ್ಯ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಪೊಲೀಸ್ ಇಲಾಖೆಗಳಿಗೆ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

