ಗುಲ್ಬರ್ಗಾ

ಬಾಲ್ಯ ವಿವಾಹಕ್ಕೆ ಅಧಿಕಾರಿಗಳಿಂದ ಬ್ರೇಕ್

Published On :

ಗುಲ್ಬರ್ಗ: ಜಿಲ್ಲೆಯ ಜೇವರ್ಗಿ ತಾಲೂಕಿನ ಕುಮ್ಮನ ಸಿರಸಗಿ ಗ್ರಾಮದಲ್ಲಿ ನಿಶ್ಚಯವಾಗಿದ್ದ ಬಾಲ್ಯ ವಿವಾಹವೊಂದು ಅಧಿಕಾರಿಗಳ ಮಧ್ಯೆ ಪ್ರವೇಶದಿಂದ ರದ್ದಾಗಿದೆ. ಕುಮ್ಮನ ಸಿರಸಗಿ ಗ್ರಾಮದಲ್ಲಿ ಮಂಗಳವಾರ ಜೂ. 4 ರಂದು ಎರಡು ಬಾಲ್ಯ ವಿವಾಹಗಳ ಮೂಹರ್ತಗಳನ್ನು ನಿಗದಿಪಡಿಸಲಾಗಿತ್ತು. 21 ವರ್ಷ ವಯಸ್ಸಿನ ಯುವಕ ಮತ್ತು 7ನೇ ತರಗತಿಯಲ್ಲಿ ಓದುತ್ತಿರುವ 13 ವರ್ಷ ವಯಸ್ಸಿನ ಬಾಲಕಿಯೊಂದಿಗೆ ಹಾಗೂ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ 37 ವರ್ಷ ವಯಸ್ಸಿನ ಯುವಕನ ಮದುವೆ 9ನೇ ತರಗತಿಯಲ್ಲಿ ಓದುತ್ತಿರುವ 14 ವರ್ಷದ ಬಾಲಕಿಯೊಂದಿಗೆ ಒಂದೇ ಮಂಟಪದಲ್ಲಿ ನಡೆಯುವುದರಲ್ಲಿತ್ತು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಎನ್. ನಾರಾಯಣ ಸ್ವಾಮಿ, ಜಿಲ್ಲಾ ಕಾನೂನು ಮತ್ತು ಪರಿವೀಕ್ಷಣಾಧಿಕಾರಿ ಭರತೇಶ ಶೀಲವಂತರ್ ಮತ್ತಿತರರು ಗ್ರಾಮಕ್ಕೆ ಭೇಟಿ ನೀಡಿ ಪೋಷಕರಿಗೆ ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.  ಆಗ ಪಾಲಕರು ಮಗಳಿಗೆ 18 ವರ್ಷ ವಯಸ್ಸಾಗುವವರೆಗೆ ಮದುವೆ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಡುವ ಮೂಲಕ ಈ ಮದುವೆ ನಿಂತಿತು. ಆದರೆ, 9ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಗೆ 18 ವರ್ಷಗಳು ತುಂಬಿದೆ ಎಂದು ಆಕೆಯ ಪಾಲಕರು ವೈದ್ಯಾಧಿಕಾರಿಗಳು ನೀಡಿದ ದೃಢೀಕರಣ ಪತ್ರ ಅಧಿಕಾರಿಗಳಿಗೆ ನೀಡಿದ್ದರಿಂದ ಆ ವಿವಾಹ ನೇರವೇರಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.