ಗುಲ್ಬರ್ಗಾ

ಮೂಲ ಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಯಾದಗಿರಿ, ಜೂ.6
ಶೌಚಾಲಯ ಮತ್ತು ಮೂಲಭೂತ ಸೌಲಭ್ಯ ಕಲ್ಪಿಸಲು ಮನವಿ ಪತ್ರ ಸಲ್ಲಿಸಿದರೂ ಕ್ರಮ ಕೈಗೊಳ್ಳದ್ದನ್ನು ಖಂಡಿಸಿ ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈದಪ್ಪ ಗುತ್ತೆದಾರ ನೇತೃತ್ವದಲ್ಲಿ ಗುರುವಾರ ಶಹಾಪುರ ತಾಲೂಕಿನ ಬಿಳ್ಹಾರ ಗ್ರಾಪಂ ವ್ಯಾಪ್ತಿಯ ಕೋನಹಳ್ಳಿಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
  ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸೈದಪ್ಪ ಗುತ್ತೇದಾರ, ಬಿಳ್ಹಾರ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋನಹಳ್ಳಿ ಗ್ರಾಮದಲ್ಲಿ ಇದುವರೆಗೂ ಯಾವುದೇ ಯೋಜನೆಯಡಿ ಶೌಚಾಲಯ ನಿರ್ಮಿಸಿಲ್ಲ. ಇದರಿಂದ ಮಹಿಳೆಯರಿಗೆ ತೊಂದರೆಯಾಗಿದ್ದು, ಬಯಲು ಶೌಚಾಲಯವೇ ಗತಿಯಾಗಿದೆ. ರಾತ್ರಿ ಸಮಯದಲ್ಲಿ ಬಹಿರ್ದೆಸೆಗೆ ಹೋಗಲು ವಿಷ- ಜಂತುಗಳ ಹಾವಳಿ ಎದುರಿಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಪಂ ಆಡಳಿತ ಅಸಡ್ಡೆ: ದರ್ಗಾದ ಹತ್ತಿರದಲ್ಲಿ ಬರುವ ಮಸೀದಿಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು 1 ವರ್ಷವಾದರೂ ಗ್ರಾಪಂ.ನವರು ಇದುವರೆಗೆ ತೆಗೆದಿಲ್ಲ. ಇದರಿಂದ ಸ್ಥಳೀಯರು ಪ್ರಾಣಪಾಯದ ಭಯದಲ್ಲಿ ಸಂಚರಿಸುವಂತಾಗಿದೆ. ಈ ಸಮಸ್ಯೆ ಬಗೆಹರಿಸುವಂತೆ ಅನೇಕ ಬಾರಿ ಮನವಿ ನೀಡಿದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ಮನವಿ ಸಲ್ಲಿಕೆ: ಕೋನಹಳ್ಳಿ ಗ್ರಾಮದಲ್ಲಿ ಶೌಚಾಲಯ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕು. ದರ್ಗಾದ ಹತ್ತಿರದಲ್ಲಿ ಬರುವ ಮಸೀದಿಯ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು ಸರಿಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಕಾಪಾಡುವುದು, ಗ್ರಾಮದಲ್ಲಿ ಆಟದ ಮೈದಾನ ನಿರ್ಮಾಣ ಮಾಡುವುದು, ಈಗಾಗಲೇ ವಸತಿ ಯೋಜನೆಯಲ್ಲಿ ಮಂಜೂರಾಗಿರುವ ಮನೆಗಳನ್ನು ನೈಜ ಫಲಾನುಭವಿಗಳಿಗೆ ಹಂಚಬೇಕೆಂಬ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಲಾಯಿತು.
  ಸಕ್ರೆಪ್ಪ ವಡಿಗೇರಾ, ಅಪ್ಪುಗೌಡ, ನಾಗಪ್ಪ   ಸಾಹುಕಾರ, ನಿಂಗಪ್ಪ ಪೂಜಾರಿ, ಮರೆಪ್ಪ ಬಿಳ್ಹಾರ್, ಹಣಮಂತ ಕಂದಳ್ಳಿ, ಸುಭಾಸ, ಸೈದಪ್ಪ, ಸಿದ್ದಪ್ಪ ಕಂದಳ್ಳಿ, ಶಾಂತಕುಮಾರ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.