ಇಂದು ಆರೋಗ್ಯ ತಪಾಸಣಾ ಶಿಬಿರ
ಗುಲ್ಬರ್ಗ: ಸೇಡಂ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೈದ್ರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆ ನೇತೃತ್ವದಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ವಾಜಪೇಯಿ ಆರೋಗ್ಯಶ್ರೀ ಯೋಜನೆಯಡಿ ಜೂ. 7 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಚಿಂಚೋಳಿ ತಾಲೂಕಿನ ಗ್ರಾಮಗಳ ಬಿಪಿಎಲ್ ಕಾರ್ಡ್ ಹೊಂದಿದ ಕುಟುಂಬದ ರೋಗಿಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಈ ಶಿಬಿರದಲ್ಲಿ ಕ್ಯಾನ್ಸರ್, ನರರೋಗ, ಮೂತ್ರಪಿಂಡದ ತೊಂದರೆ, ಸುಟ್ಟಗಾಯ, ಅಪಘಾತ ಹಾಗೂ ನವಜಾತ ಶಿಶುಗಳ ಪರಿಣಿತ ವೈದ್ಯರು ರೋಗಿಗಳನ್ನು ಪರೀಕ್ಷಿಸಿ ಚಿಕಿತ್ಸೆ ಮತ್ತು ಸಲಹೆ ನೀಡುವರು.
ಭೀ.ಗುಡಿಯಲ್ಲಿ ಇಂದು ಕಾರ್ಯಾಗಾರ
ಗುಲ್ಬರ್ಗ: ವೀರಶೈವ ಸರಕಾರಿ ನೌಕರರ ಕಲ್ಯಾಣ ಸಂಘ, ಭೀಮರಾಯನಗುಡಿಯಲ್ಲಿ ಸೇವಾ ತೆರಿಗೆ ಕಡಿತಗಳ ಕುರಿತು ಜೂ. 7ರಂದು ಬೆ.11ರಿಂದ ಸಾಯಂಕಾಲ 5ರವರೆಗೆ ಕಾರ್ಯಾಗಾರ ನಡೆಯಲಿದೆ. ಸಮಾರಂಭದ ಅಧ್ಯಕ್ಷತೆಯನ್ನು ಭೀಮರಾಯನಗುಡಿ ಮುಖ್ಯ ಲೆಕ್ಕಾಧಿಕಾರಿಗಳು (ಕೃಭಾಜನಿನಿ ಕಾಲುವೆಗಳು) ಎಸ್.ಎಸ್. ದಿವಾಕರ, ಉದ್ಘಾಟಕರಾಗಿಬಿ ಕೆಬಿಜೆಎನ್‌ಎಲ್ ಭೀ.ಗುಡಿ ಮುಖ್ಯ ಎಂಜಿನಿಯರ್ ವೈ.ಎಸ್. ಜುಮನಾಳ, ಮುಖ್ಯ ಅತಿಥಿಗಳಾಗಿ ಮುಖ್ಯ ಅಭಿಯಂತರರು, ಕೃಭಾಜನಿನಿ ಕಾಲುವೆ ವಲಯ ಸಂ-2, ರಾಂಪೂರ ಎನ್. ಸುದರ್ಶನ ಹಾಗೂ ವಿಶೇಷ ಉಪನ್ಯಾಸಕರಾಗಿ ಬೆಂಗಳೂರಿನಿಂದ ಕೆ.ಎನ್. ರವಿ, ಚಾರ್ಟರ್ಡ್ ಅಕೌಂಟೆಂಟ್, ಜಯಕುಮಾರ ಶಹಾ, ಚಾರ್ಟರ್ಡ್ ಅಕೌಂಟೆಂಟ್ ಈ ಸೇವಾ ತೆರಿಗೆ ಕಡಿತಗಳ ಕುರಿತು ನಡೆಯುತ್ತಿರುವ ಕಾರ್ಯಾಗಾರದಲ್ಲಿ ಉಪನ್ಯಾಸ ನೀಡಲಿದ್ದಾರೆ.
ಇಂದು ಮಾಧ್ಯಮ ಮಿತ್ರರೊಂದಿಗೆ ಸಂವಾದ
ಗುಲ್ಬರ್ಗ: ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ, ಹಿರಿಯ ರಂಗಕರ್ಮಿ ಎಲ್.ಬಿ.ಕೆ. ಆಲ್ದಾಳ ಅವರೊಂದಿಗೆ ಜೂ.7ರಂದು ಬೆ.11ಕ್ಕೆ ಕನ್ನಡ ಭವನದಲ್ಲಿ ಮಾಧ್ಯಮ ಮಿತ್ರರೊಂದಿಗೆ ಸಂವಾದ ಕಾರ್ಯಕ್ರಮ ಜರುಗಲಿದೆ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ಬಿ.ಎಚ್. ನಿರಗುಡಿ, ಸುರೇಶ ಬಡಿಗೇರ ತಿಳಿಸಿದ್ದಾರೆ. ಸಂವಾದ ಕಾರ್ಯಕ್ರಮದ ನೇತೃತ್ವವನ್ನು ಜಿಲ್ಲಾ ಕಸಾಪ ಅಧ್ಯಕ್ಷ ಮಹಿಪಾಲರೆಡ್ಡಿ ಮುನ್ನೂರ ವಹಿಸಲಿದ್ದಾರೆ. ಗುಲ್ಬರ್ಗ ಜಿಲ್ಲೆ ಎಲ್ಲ ಮಾಧ್ಯಮ ಮಿತ್ರರು ಸಂವಾದದಲ್ಲಿ ಭಾಗವಹಿಸಬೇಕು ಎಂದು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

