ರೈತ ಸಂಜೀವಿನಿ: 50 ಸಾವಿರ ಪರಿಹಾರ ವಿತರಣೆ
ಚಿತ್ತಾಪುರ: ತಾಲೂಕಿನ ಡೋಣಗಾಂವ ಗ್ರಾಮದಲ್ಲಿ ಇತ್ತೀಚೆಗೆ ಹಾವು ಕಚ್ಚಿ ಮೃತಪಟ್ಟ ರೈತ ಮಹಿಳೆ ಸಾಬಮ್ಮ ಅವರ ಕುಟುಂಬದವರಿಗೆ ರೈತ ಸಂಜೀವಿನಿ ಅಪಘಾತ ವಿಮಾ ಯೋಜನೆಯಡಿ 50 ಸಾವಿರ ಚೆಕ್ಅನ್ನು ಎಪಿಎಂಸಿ ಅಧ್ಯಕ್ಷ ಶಿವಯೋಗಿ ಸಾಹು ಗುಂಡಗುರ್ತಿ ನೀಡಿದರು. ಎಪಿಎಂಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮೃತರ ತಂದೆ ದೇವಿಂದ್ರಪ್ಪ ಅವರಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಸರ್ಕಾರದ ಯೋಜನೆಗಳ ಲಾಭವನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದರು. ರೈತರು ಚಟುವಟಿಕೆಯಲ್ಲಿ ತೊಡಗಿದಾಗ ಅಪಘಾತದಲ್ಲಿ ಮೃತಪಟ್ಟರೆ ಇಲ್ಲವೇ ಗಾಯಗೊಂಡರೆ ರೈತ ಸಂಜೀವಿನಿ ಅಪಘಾತ ಯೋಜನೆಯಡಿ ಪರಿಹಾರ ಪಡೆದುಕೊಳ್ಳಬಹುದು ಎಂದು ಹೇಳಿದರು. ಕೈ, ಕಾಲು, ಕಣ್ಣು, ಬೆರಳು ಕಳೆದುಕೊಂಡಾಗ, ಸೋಂಟ ಮುರಿದುಕೊಂಡಾಗ, ಜತೆಗೆ ಲೈಸನ್ಸ್ ಹೊಂದಿದ ಹಮಾಲರು, ತೂಕದವರು, ಚಕ್ಕಡಿಯವರು ಜನಶ್ರೀ ವಿಮಾ ಯೋಜನೆಯಡಿ ಪರಿಹಾರ ಪಡೆದುಕೊಳ್ಳಬಹುದು. ಸಮಪರ್ಕ ದಾಖಲೆಗಳು ಇಲಾಖೆಗೆ ಸಲ್ಲಿಸಿ ಯೋಜನೆಯ ಲಾಭ ಪಡೆದುಕೊಳ್ಳಬೇಕೆಂದು ಹೇಳಿದರು. ಕಾರ್ಯದರ್ಶಿ ಶಿವಶಂಕರ ನನ್ನಾ, ಶರಣು, ಮುಖಂಡ ನಿಂಗಣ್ಣ ಹೆಗಲೇರಿ ಹಾಗೂ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

