1 ಲಕ್ಷ ಮೌಲ್ಯದ ಗುಟ್ಕಾ- ಪಾನ್ ಮಸಾಲ ಜಪ್ತಿ
ಕ.ಪ್ರ. ವಾರ್ತೆ ಗುಲ್ಬರ್ಗ ಜೂ.7
ಗುಟ್ಕಾ, ಪಾನ್ ಮಸಾಲ ತಯಾರಿಕೆ, ಸಂಗ್ರಹಣೆ, ಮಾರಾಟ, ವಿತರಣೆ ಮೇಲೆ ನಿಷೇಧ ಹೇರಿರುವ ಬೆನ್ನಲ್ಲೇ ಜಿಲ್ಲಾಡಳಿತದ ಅಧಿಕಾರಿಗಳ ತಂಡ ಶುಕ್ರವಾರ ನಗರದಲ್ಲಿ 18 ಕಡೆಗಳಲ್ಲಿ ಮಿಂಚಿನ ದಾಳಿ ನಡೆಸಿ 1 ಲಕ್ಷ ಮೌಲ್ಯದ ವಿವಿಧ ಕಂಪನಿಗಳ ಗುಟ್ಕಾ ಜಪ್ತಿ ಮಾಡಿದ್ದಾರೆ.
ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ನಿಷೇಧ ಮತ್ತು ಮಾರಾಟ ನಿರ್ಬಂಧ) ನಿಬಂಧನೆಗಳು, 2011ರ ನಿಬಂಧನೆ 2.3.4ರ ಪ್ರಕಾರ ಜಿಲ್ಲಾದ್ಯಂತ ತಕ್ಷಣದಿಂದ ಜಾರಿಗೆ ಬರುವಂತೆ ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ತಂಬಾಕು ಮತ್ತು ನಿಕೋಟಿನ್ ಘಟಕಾಂಶಗಳನ್ನು ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲ ಹಾಗೂ ಇತರೆ ಯಾವುದೇ ಹೆಸರಿನಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಗುಟ್ಕಾ ಮತ್ತು ಪಾನ್ ಮಸಾಲ ಪದಾರ್ಥಗಳ ತಯಾರಿಕೆ ಸಂಗ್ರಹಣೆ, ಮಾರಾಟ ಹಾಗೂ ವಿತರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ನ್ಯಾಯ ನಿರ್ಣಯ ಅಧಿಕಾರಿಗಳೂ ಆದ ಅಪರ ಜಿಲ್ಲಾಧಿಕಾರಿಗಳು ಎರಡು ದಿನಗಳ ಹಿಂದಷ್ಟೇ ಹೇಳಿಕೆ ನೀಡಿದ್ದರು.
18 ಅಂಗಡಿ ಮೇಲೆ ದಾಳಿ: ಈ ಹೇಳಿಕೆ ವ್ಯಾಪಾಕ ಪ್ರಚಾರ ಪಡೆದಿರುವ ಮರುದಿನವೇ ಈ ದಾಳಿ ನಡೆದಿದೆ. ಜಿಲ್ಲಾ ಆರೋಗ್ಯ ಇಲಾಖೆಯ ಹಿರಿಯ ವೈದ್ಯರಾದ ಡಾ. ಅಮರೇಶ ಕೊಳ್ಳೂರ, ಆಹಾರ ಸುರಕ್ಷತಾ ಅಧಿಕಾರಿ ಬಸವರಾಜ ಬಿರಾದಾರ್, ಹೆಚ್ಚುವರಿ ತಹಸೀಲ್ದಾರ್ ಪ್ರಕಾಶ ಚಿಂಚೋಳಿ, ವಿನೋದ ರೆಡ್ಡಿ ಅವರನ್ನೊಳಗೊಂಡ ತಂಡದವರು ಕಿರಾಣಾ ಬಜಾರ್, ದರ್ಗಾ, ಗಂಜ್ ಪ್ರದೇಶದ 18 ಅಂಗಡಿಗಳ ಮೇಲೆ ದಾಳಿ ನಡೆಸಿ 1 ಲಕ್ಷ ರು ಮೌಲ್ಯದ ಗುಟ್ಕಾ- ಪಾನ್ ಮಸಾಲಾ ದಾಸ್ತಾನು ಪತ್ತೆ ಮಾಡಿದ್ದಾರೆ.
ಎಲ್ಲ ಅಂಗಡಿ ಮಾಲೀಕರಿಗೆ ಮೊದಲ ಬಾರಿಯ ದಾಳಿ ಎಂದು ಎಚ್ಚರಿಕೆ ನೋಟಿಸ್ ನೀಡಲಾಗಿದೆ. ಇದೇ ಪ್ರವೃತ್ತಿಯನ್ನು ಅವರು ಮುಂದಿನ ದಾಳಿಗಳ ಸಂದರ್ಭದಲ್ಲಿ ಪುನರಾವರ್ತಿಸಿದ್ದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತದೆ ಎಂದು ದಾಳಿ ತಂಡದಲ್ಲಿರುವ ಅಧಿಕಾರಿಗಳು ಹೇಳಿದ್ದಾರೆ.
ಸಂಚಾರಿ ಹೈಕೋರ್ಟ್ ಪೀಠಗಳ ಕಾಯಂ: ಸಂಭ್ರಮ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

