ಎಐಡಿಎಸ್‌ಒ ಜಿಲ್ಲಾ ಮಟ್ಟದ ಕಾರ್ಯಕರ್ತರ ಶಿಬಿರ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ಜೂ.7
ಸರ್ಕಾರವು ಪ್ರಜಾತಾಂತ್ರಿಕ ಚರ್ಚೆಗೆ ಒಳಪಡಿಸದೆ ಹಾಗೂ ಶಿಕ್ಷಣದ ಜವಾಬ್ದಾರಿಯಿಂದ ಹಿಂದೆ ಸರಿಯಲು ಶಿಕ್ಷಣದ ಹಕ್ಕು ಕಾಯಿದೆ ಜಾರಿಗೊಳಿಸುವುದು ಸರಿಯಲ್ಲ ಎಂದು ಎಐಡಿಎಸ್‌ಒ ರಾಜ್ಯ ಅಧ್ಯಕ್ಷ ಡಾ. ವಿ.ಎನ್. ರಾಜಶೇಖರ ಖಂಡಿಸಿದರು.
ಎಐಡಿಎಸ್‌ಒ ಜಿಲ್ಲಾ ಸಮಿತಿ ವತಿಯಿಂದ ನಡೆದ ಜಿಲ್ಲಾ ಮಟ್ಟದ ಕಾರ್ಯಕರ್ತರ ಶಿಬಿರದಲ್ಲಿ ಮಾತನಾಡಿದರು. ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಕಡ್ಡಾಯ ತೇರ್ಗಡೆ ಪದ್ಧತಿ ತಂದಿರುವುದು ಸರಿಯಲ್ಲ. ಇದರಿಂದ ಶಿಕ್ಷಣದ ಗುಣಮಟ್ಟ ಕುಸಿಯುತ್ತಿದೆ. ಈಗಾಗಲೇ ಸಂಸತ್ತಿನ ಶಿಕ್ಷಣ ಸ್ಥಾಯಿ ಸಮಿತಿಯ ಅಂಕಿ-ಅಂಶಗಳ ಮುಖಾಂತರ ಶಿಕ್ಷಣದ ಗುಣಮಟ್ಟ ಕುಸಿಯುತ್ತಿರುವುದನ್ನು ವರದಿ ಮಾಡಿರುವುದರಿಂದ ಕೂಡಲೇ ಈ ಪದ್ಧತಿ ಕೈ ಬಿಡಬೇಕು ಎಂದು ಆಗ್ರಹಿಸಿದರು.
ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಡಾ. ಎಸ್.ಎಂ. ಶರ್ಮಾ ಪ್ರಾಸ್ತಾವಿಕವಾಗಿ ಮಾತನಾಡಿ, ಗುಲ್ಬರ್ಗದಲ್ಲಿ ವಸತಿ ನಿಲಯಗಳು ಹಾಗೂ ಕಾಲೇಜಿನ ಮೂಲ ಸೌಲಭ್ಯಗಳನ್ನು ಒದಗಿಸುವುದರ ಕುರಿತು ಪರಿಹಾರಕ್ಕಾಗಿ ಹೋರಾಟ ಸಂಘಟಿಸಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ನಗರ ಅಧ್ಯಕ್ಷ ಮಲ್ಲಿನಾಥ ಸಿಂಘೆ, ಸಂಘಟಕರಾದ ಅಶ್ವಿನಿ ಚೌಲ್, ಏಕತಾ ಬಿರಾದಾರ, ಅಭಯಾ ದಿವಾಕರ್, ಎಸ್. ವೀರೇಶ, ಹಣಮಂತ, ವಿಶ್ವನಾಥ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಐಡಿಎಸ್‌ಒ ಜಿಲ್ಲಾ ಅಧ್ಯಕ್ಷ ಜಗನ್ನಾಥ ಎಸ್.ಎಚ್. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

