ಬಿತ್ತನೆ ಬೀಜ, ಗೊಬ್ಬರ ವಿತರಣೆಗೆ ಆಗ್ರಹ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ಜೂ.7
ರೈತರಿಗೆ ಈ ವರ್ಷವಾದರೂ ಗುಣಮಟ್ಟದ ಬಿತ್ತನೆ ಬೀಜ ಹಾಗೂ ಗೊಬ್ಬರ ವಿತರಿಸಬೇಕು ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಕಳೆದ ವರ್ಷ ಕಳಪೆ ಬಿತ್ತನೆ ಬೀಜ ಕೊಟ್ಟಿರುವುದರಿಂದ ಎಷ್ಟೋ ರೈತರು ಕಂಗಾಲಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬಂದೊದಗಿತ್ತು. ಸರಿಯಾದ ಸಮಯಕ್ಕೆ ಗೊಬ್ಬರ ಸಿಗದೆ ಬಡ ರೈತರು ಪರದಾಡುವಂತಾಗಿತ್ತು. ಆದ್ದರಿಂದ ಗುಣಮಟ್ಟದ ಬೀಜ ವಿತರಿಸಬೇಕು ಎಂದು ಜೈಕರವೇ ಉಪಾಧ್ಯಕ್ಷ ಮಂಜುನಾಥ ಬಿ. ಹಾಗರಗಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಗುಣಮಟ್ಟದ ಬೀಜ ಹಾಗೂ ಗೊಬ್ಬರ ಪರೀಕ್ಷಿಸಿ ಸರಿಯಾದ ಸಮಯಕ್ಕೆ ನೀಡದಿದ್ದರೆ ವೇದಿಕೆ ಹಾಗೂ ರೈತರು ಸೇರಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕೃಷಿ ನಿರ್ದೇಶಕರಿಗೆ ನೀಡಿದ ಮನವಿ ಪತ್ರದಲ್ಲಿ ಎಚ್ಚರಿಸಿದರು.
ಜಗನ್ನಾಥ ಪಟ್ಟಣಶೆಟ್ಟಿ, ಸಚಿನ್ ಎಸ್. ಫರಹತಾಬಾದ್, ಅಲೀಮಖಾನ್, ಬಿ. ಜಯಸಿಂಗ್, ಚಂದ್ರು ಪಾಟೀಲ್, ಕಾಶಿನಾಥ ಮಾಳಗೆ, ಶ್ರೀಕಾಂತ ಆಲೂರ, ಬಾಲರಾಜ, ಬಾಬುರಾವ ಚಿಂಚನಸೂರ, ಶಿವು ಹಾಗರಗಾ, ಮೋಹನ, ಚನ್ನು ಮರಬ್ ಸೇರಿದಂತೆ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

