ಗುಲ್ಬರ್ಗಾ

ಡೆಂಘೀ ನಿಯಂತ್ರಣಕ್ಕೆ ಎಲ್ಲರ ಸಹಕಾರ ಅಗತ್ಯ

Published On :

ಕನ್ನಡಪ್ರಭ ವಾರ್ತೆ  ಸುರಪುರ  ಜೂ.8
ಮಾರಣಾಂತಿಕ ಡೆಂಘೀ ಜ್ವರ ನಿಯಂತ್ರಣಕ್ಕೆ ಎಲ್ಲ ಇಲಾಖೆಗೆ ಸಹಭಾಗಿತ್ವ ಮತ್ತು ನಾಗರಿಕರ ಸಹಕಾರ ಅತೀ ಮುಖ್ಯವಾಗಿದೆ ಎಂದು ತಹಸೀಲ್ದಾರ್ ಮಹ್ಮದ್ ಗೌಸುದ್ದೀನ್‌ತಿಳಿಸಿದರು.
ತಾಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಜರುಗಿದ ಡೆಂಘೀ ಜ್ವರದ ಜಾಗೃತಿ ಸಭೆಯಲ್ಲಿ ತಹಸೀಲ್ದಾರ್ ಮಹ್ಮದ್ ಗೌಸುದ್ದೀನ್ ಮಾತನಾಡಿ, ಪುರಸಭೆ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಡೆಂಘೀ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.
ಸ್ವಚ್ಛತೆ ಕಾಪಾಡಲು ಸೂಚನೆ: ಡೆಂಘೀ ಜ್ವರ ಈಡೀಸ್ ಇಜಿಪ್ಟೈ ಸೊಳ್ಳೆ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ. ಇದು ಹರಡದಂತೆ ಎಚ್ಚರಿಕೆ ವಹಿಸಲು ಪುರಸಭೆಯವರು ಪ್ರತಿ ಗಲ್ಲಿಗಳಲ್ಲಿ ಕಡ್ಡಾಯವಾಗಿ ಫಾಗಿಂಗ್ ಮಾಡಬೇಕು. ಡಿಡಿಟಿ ಸಿಂಪರಣೆ ಮತ್ತು ಬ್ಲೀಚಿಂಗ್ ಪೌಡರ್ ಹಾಕಬೇಕು. ಗಲ್ಲಿಗಳಲ್ಲಿ ಕಸ ಚೆಲ್ಲುವಿಕೆಗೆ ಕಸದ ತೊಟ್ಟಿಗಳನ್ನು ಅಳವಡಿಸಬೇಕು. ಎಲ್ಲಿಯೂ ಚರಂಡಿ ನೀರು ನಿಲ್ಲದಂತೆ ಕಟ್ಟೆಚ್ಚರ ವಹಿಸಿ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಸೂಚಿಸದರು.
ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಭಿತ್ತಿ ಪತ್ರಗಳು, ಪೋಸ್ಟರುಗಳು ಮತ್ತು ಧ್ವನಿವರ್ಧಕಗಳ ಮುಖಾಂತರ, ಶಾಲಾ ಮಕ್ಕಳಿಂದ ಪ್ರತಿ ಶನಿವಾರ ಜಾಥಾ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ರೋಗದ ಕುರಿತು ಪ್ರಚಾರ ಮಾಡುವ ಮೂಲಕ ಜನರಲ್ಲಿ ಡೆಂಘೀ ಬಗ್ಗೆ ಜಾಗೃತಿ ಮೂಡಸಬೇಕು. ಇದಕ್ಕೆ ತಾಲೂಕಿನ ಎಲ್ಲ ಅನುಷ್ಠಾನಾಧಿಕಾರಿಗಳು ಸಹಕರಿಸಬೇಕು ಎಂದರು.
ಜನತೆಗೆ ಸಲಹೆ: ತಾಲೂಕು ವೈದ್ಯಾಧಿಕಾರಿ ಡಾ. ಆರ್.ವಿ. ನಾಯಕ ಮಾತನಾಡಿ, ಮನೆಯಲ್ಲಿ ಡ್ರಮ್, ಬ್ಯಾರಲ್, ಮಣ್ಣಿನ ಮಡಿಕೆಗಳನ್ನು, ನೀರಿನ ತೊಟ್ಟಿಗಳನ್ನು ಕನಿಷ್ಠ ವಾರಕ್ಕೊಮ್ಮೆಯಾದರೂ ಸ್ವಚ್ಛಗೊಳಿಸಬೇಕು. ಟೈರ್, ಎಳೆ ನೀರಿನ ಚಿಪ್ಪು, ಪ್ಲಾಸ್ಟಿಕ್ ಚೀಲ, ಗುಟ್ಕಾ ಚೀಟಗಳನ್ನು ಬಿದಿಯಲ್ಲಿ ಎಸೆಯದಂತೆ ಎಚ್ಚರಿಕೆ ವಹಿಸಬೇಕು. ಸುತ್ತಮುತ್ತಲಿನ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಬೇಕು.  ಕಣ್ಣಿನ ಹಿಂಭಾಗದಲ್ಲಿ ಬಾವು ಬರುವಿಕೆ ತೆಲೆ ಸುತ್ತುವಿಕೆ ವಾಂತಿ- ವಾಕರಿಕೆ ಕಂಡು ಬಂದಲ್ಲಿ ತಕ್ಷಣವೇ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದರು. ಸಭೆಯಲ್ಲಿ ಸಿಡಿಪಿಒ ಥಾಮಸ್ ದೊಡ್ಡಮನಿ, ವೈದ್ಯಾಧಿಕಾರಿ ನಾಗನಾಥ, ಪಿಎಸ್‌ಐ ಹಣಮಂತಪ್ಪ ಪಟ್ಟೇದಾರ್, ಭೀಮಣ್ಣ ಆಲ್ದಾಳ್, ನಾಗಪ್ಪ, ವೀರಕುಮಾರ, ಅಮರಪ್ಪ, ಎಸ್.ಬಿ. ತೆಗ್ಗಿನ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.