ಮೂಲ ವಿಜ್ಞಾನದಿಂದ ವಿಮುಖ; ಕಳವಳ
ಕನ್ನಡಪ್ರಭ ವಾರ್ತೆ ಗುಲ್ಬರ್ಗ ಜೂ.8
ವಿದ್ಯಾರ್ಥಿಗಳು ಮೂಲ ವಿಜ್ಞಾನದಿಂದ ವಿಮುಖರಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಸಂಸದ ಡಾ. ಬಸವರಾಜ ಪಾಟೀಲ್ ಸೇಡಂ ಅವರು, ಮೂಲ ವಿಜ್ಞಾನಕ್ಕೆ ಒತ್ತು ನೀಡಿದರೆ ಮಾತ್ರ ಎಲ್ಲ ರಂಗಗಳಲ್ಲಿ ಪ್ರಗತಿ ಹೊಂದಲು ಸಹಕಾರಿ ಎಂದರು.
ಪ್ರಶಸ್ತಿ; ನಗರದ ಸರ್ಕಾರಿ ಪದವಿಪೂರ್ವ ಬಾಲಕಿಯರ ಕಾಲೇಜಿನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ 2012-13ನೇ ಸಾಲಿನ ಯುವ ವಿಜ್ಞಾನ ಪ್ರಶಸ್ತಿ ನೀಡಿ ಮಾತನಾಡಿದರು.
ಮೂಲ ವಿಜ್ಞಾನ ಕಲಿಕೆಗೆ ಪ್ರೋತ್ಸಾಹ ನೀಡಲು ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಪ್ರತಿ ವಿದ್ಯಾರ್ಥಿಗೆ ರು. 12 ಸಾವಿರ ವೆಚ್ಚ ಮಾಡಲಾಗುತ್ತಿದೆ. ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಮೂಲ ವಿಜ್ಞಾನವನ್ನು ಮರೆತರೆ ನಾವು ಅವನತಿಯತ್ತ ಹೋದಂತೆ ಎಂಬ ಎಚ್ಚರಿಕೆ ನೀಡಿದರು.
ಲಾಭ ಪಡೆಯಿರಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಗುಲ್ಬರ್ಗ ಜಿಲ್ಲಾಧ್ಯಕ್ಷ ಡಾ. ಎಸ್. ಎಸ್. ಗುಬ್ಬಿ ಮಾತನಾಡಿ, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವನೆ ಬೆಳಸುವ ಉದ್ದೇಶದಿಂದ ಪರಿಷತ್ತು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳು ಇದರ ಲಾಭ ಪಡೆದುಕೊಂಡು ಹೊಸ ವಿಚಾರಗಳನ್ನು ಮೈಗೂಡಿಸಿಕೊಳ್ಳಬೇಕೆಂದರು. ಸೆಂಟ್ ಜೋಸೆಫ್ ಶಾಲೆಯ ವಿದ್ಯಾರ್ಥಿ ಲಕ್ಷ್ಮೀ ಮರಗೋಳ, ಎಸ್ಬಿಆರ್ನ ಪವನದೇವ ಗಣಪತಿ ಅವರಿಗೆ ಯುವ ವಿಜ್ಞಾನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಗೌರವಾಧ್ಯಕ್ಷ ಬಿ. ಕೆ. ಚಳಗೇರಿ, ಕಾರ್ಯಕಾರಿ ಸಮಿತಿ ಸದಸ್ಯ ಶ್ರೀಶೈಲ್ ಘೂಳಿ, ಪ್ರಾಚಾರ್ಯ ಎನ್. ಎಂ. ಹೊಸೂರ ಇತರರು ಉಪಸ್ಥಿತರಿದ್ದರು. ಡಿಡಿಪಿಐ ಟಿ. ಜಯರಾಮ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರೇಣುಕಾ ಪ್ರಾರ್ಥನೆ ಗೀತೆ ಹಾಡಿದರು. ಕರಾವವಿಪ ರಾಜ್ಯ ಖಜಾಂಚಿ ಗಿರೀಶ ಕಡ್ಲೇವಾಡ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

