ವಿಕಲಚೇತನರ ವೈದ್ಯಕೀಯ ಮೌಲ್ಯಾಂಕನ ಶಿಬಿರ
ಗುಲ್ಬರ್ಗ/ಚಿತ್ತಾಪುರ: ಚಿತ್ತಾಪುರ ತಾಲೂಕು ಮಟ್ಟದ ವಿಶೇಷ ಅಗತ್ಯಯುಳ್ಳ ಅಂಗವಿಕರ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರವನ್ನು ಜೂ.11ರಂದು ಬಿಆರ್‌ಸಿ ಕೇಂದ್ರದ ಆವರಣದಲ್ಲಿ ಬೆಳಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಚವ್ಹಾಣ ಶೆಟ್ಟಿ ಹಾಗೂ ಸರ್ವ ಶಿಕ್ಷಣ ಅಭಿಯಾನ ಕ್ಷೇತ್ರ ಸಮನ್ವಯ ಅಧಿಕಾರಿ ಸಿದ್ದವೀರಯ್ಯ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರ್ವ ಶಿಕ್ಷಣ ಅಭಿಯಾನ ಗುಲ್ಬರ್ಗ ವತಿಯಿಂದ ಸಮನ್ವಯ ಶಿಕ್ಷಣದಡಿಯಲ್ಲಿ ಸೇಡಂ ಬ್ಲಾಕ್‌ನಲ್ಲಿ ಜೂನ್ 12ರಂದು ವಿಕಲಚೇತನ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ ಹಮ್ಮಿಕೊಳ್ಳಲಾಗಿದೆ.
ತಜ್ಞ ವೈದ್ಯರಿಂದ ತಪಾಸಣೆ ಮಾಡಿ ವಿಕಲತೆಗೆ ಅನುಸಾರವಾಗಿ ಸಾಧನ, ಸಲಕರಣೆಗೆ ಅಳತೆ ತೆಗೆದುಕೊಳ್ಳುವರು. ಆದ್ದರಿಂದ 6ರಿಂದ 14 ವಯೋವಾನದ ಮಕ್ಕಳು ಈ ಶಿಬಿರದಿಂದ ವಂಚಿತರಾಗದಂತೆ ಪಾಲಕ, ಪೋಷಕರು, ಶಿಕ್ಷಕರು, ಪಿಆರ್‌ಡಬ್ಲ್ಯು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ವೈದ್ಯಕೀಯ ಶಿಬಿರಕ್ಕೆ ಕರೆದುಕೊಂಡು ಬರಬೇಕೆಂದು ಸೇಡಂ ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಈ ಶಿಬಿರಕ್ಕೆ ಭಾಗವಹಿಸುವ ಮಗುವಿನ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ 3 ಪೋಟೊಗಳನ್ನು ತರಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

