ಗುಲ್ಬರ್ಗಾ

ಕೆಪಿಎಸ್‌ಸಿಯಲ್ಲಿ ಭ್ರಷ್ಟಾಚಾರ; ಕ್ರಮಕ್ಕೆ ಎಐಡಿವೈಒ ಆಗ್ರಹ

Published On :

ಗುಲ್ಬರ್ಗ: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ನಡೆದಿರುವ ಭ್ರಷ್ಟಾಚಾರ ಆಘಾತಕಾರಿ. ವಾಹಿನಿಯೊಂದರ ಕಾರ್ಯಾಚರಣೆಯಿಂದಾಗಿ ಬಹಿರಂಗಗೊಂಡಿರುವ ವ್ಯವಸ್ಥೆಯೊಳಗಿನ ಭ್ರಷ್ಟತೆಯು ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಭ್ರಮನಿರಸನವನ್ನುಂಟು ಮಾಡಿದೆ ಎಂದು ಎಐಡಿವೈಒ ಅಭಿಪ್ರಾಯಪಟ್ಟಿದೆ.
ಕಠಿಣ ಪರಿಶ್ರಮದಿಂದ ತಯಾರಿ ನಡೆಸಿ, ಕೆಎಎಸ್ ಮತ್ತು ವರ್ಗ 1 ಮತ್ತು ವರ್ಗ 2ರ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಅತ್ಯುತ್ತಮವಾಗಿ ಅಂಕ ಗಳಿಸಿದ ಅಭ್ಯರ್ಥಿಗಳು ಮೌಖಿಕ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆಯುತ್ತಿರುವ ವೈಚಿತ್ರ್ಯಕ್ಕೆ ಇದೀಗ ಸಾಕ್ಷಿ ಸಮೇತ ಉತ್ತರ ಸಿಕ್ಕಿದೆ ಎಂದು ಜಿಲ್ಲಾ ಕಾರ್ಯದರ್ಶಿ ಮಹೇಶ ನಾಡಗೌಡ ಆರೋಪಿಸಿದ್ದಾರೆ. ಕೂಡಲೇ ನಿಷ್ಪಕ್ಷಪಾತವಾದ ತನಿಖೆಯನ್ನು ನಡೆಸಿ, ತಪ್ಪಿತಸ್ಥರನ್ನು ಗುರುತಿಸಿ, ತ್ವರಿತವಾಗಿ ಅವರಿಗೆ ನಿದರ್ಶನೀಯ ಶಿಕ್ಷೆಯಾಗುವಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಚಿಂಚೋಳಿ; ಬೀದಿ ನಾಯಿ ಹಾವಳಿ
ಚಿಂಚೋಳಿ: ಪಟ್ಟಣದ ಚಂದಾಪುರ ನಗರದಲ್ಲಿ ಬೀದಿ ನಾಯಿಗಳ ಹಾವಳಿಯಿಂದಾಗಿ ಇಲ್ಲಿನ ಸಾರ್ವಜನಿಕರು ತೊಂದರೆ ಪಡಬೇಕಾಗಿದೆ. ಸಾಕು ಪ್ರಾಣಿಗಳನ್ನು ಕಚ್ಚಿ ಕೊಲ್ಲುತ್ತಿವೆ ಎಂದು ನಾಗರಿಕರು ದೂರಿದ್ದಾರೆ. ಚಂದಾಪುರ ನಗರದ ಆಶ್ರಯ ಕಾಲೋನಿ, ಬಸವನಗರ, ಪೊಲೀಸ್ ಕ್ವಾಟರ್ಸ್, ಬೋವಿಗಲ್ಲಿ, ಬೆಳ್ಳಿ ಬೆಳಕು ಕಾಲೋನಿ, ಪಟೇಲ್ ಕಾಲೋನಿ ಮುಂತಾದ ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ದನಕರುಗಳಿಗೆ ಮತ್ತು ಆಡು-ಕುರಿಗಳಿಗೆ ಕಚ್ಚಿ ಗಾಯಗೊಳಿಸುತ್ತಿವೆ. ಅನೇಕ ಸಲ ಚಿಕ್ಕಮಕ್ಕಳಿಗೂ ಕಚ್ಚಲು ಬೆನ್ನಟ್ಟುತ್ತಿವೆ. ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳಿಗೆ ಮತ್ತು ಸದಸ್ಯರಿಗೆ ಅನೇಕ ಸಲ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಇಲ್ಲಿನ ನಾಗರಿಕರು ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.