ಗುಲ್ಬರ್ಗಾ

ಹಲ್ಲೆ, ಅತ್ಯಾಚಾರಕ್ಕೆ ಯತ್ನ, ಕೊಲೆ ಬೆದರಿಕೆ

Published On :

ಗುಲ್ಬರ್ಗ: ಬೈಕ್ ಮೇಲೆ ತೆರಳುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಿ ಆತನ ಜೊತೆಗಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡುವ ಬೆದರಿಕೆ ಹಾಕಿದ ಘಟನೆ ತೊನಸಳ್ಳಿ(ಎಸ್) ಗ್ರಾಮದ ಬಳಿ ಶನಿವಾರ ನಡೆದಿದೆ.
ಕಡೆಹಳ್ಳಿ ಗ್ರಾಮದ ಮೋನಪ್ಪ ತಂದೆ ಸುಭಾಷ ಹಳ್ಳಿ ಎಂಬಾತ ಹಲ್ಲೆಗೊಳಗಾಗಿದ್ದಾನೆ. ಮೋನಪ್ಪ ತೊನಸಳ್ಳಿ ಗ್ರಾಮದ ಸೇತುವೆ ಬಳಿ ತನ್ನ ಅಕ್ಕಳ ಜೊತೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಎದುರಿನಿಂದ ಬಂದ ಗುರುರಾಜ, ಮಹಾಲಿಂಗಪ್ಪ, ಶರಣಪ್ಪ, ಅಣವೀರ, ಅರುಣ, ಮಹಾದೇವಪ್ಪ ವಾಹನ ಬೀಳಿಸಿ ಮೋನಪ್ಪನ ಮೇಲೆ ಬಡಿಗೆಯಿಂದ ಹಲ್ಲೆ ನಡೆಸಿ ಸುಮಿತ್ರಾ(ಹೆಸರು ಬದಲಿಸಲಾಗಿದೆ) ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ. ಈ ಕುರಿತು ಶಹಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಲ್ಕು ಜನರ ಮೇಲೆ ಹಲ್ಲೆ
ಗುಲ್ಬರ್ಗ: ಸುಮಾರು 28 ಜನ ಸೇರಿಕೊಂಡು 4 ಜನರ ಮೇಲೆ ತೀವ್ರ ಹಲ್ಲೆ ನಡೆಸಿ ಪರಾರಿಯಾದ ಘಟನೆ ಕಲ್ಲಹಿಪ್ಪರಗಾ ಗ್ರಾಮದಲ್ಲಿ ನಡೆದಿದೆ. ಕಲ್ಲಹಂಗರಗಾ ಗ್ರಾಮದಲ್ಲಿ ಬಾಬಾಸಾಹೇಬ್ ದರ್ಗಾದ ಜಾತ್ರೆ ನಿಮಿತ್ತ ನಡೆದ ಕುಸ್ತಿ ಪಂದ್ಯಾವಳಿ ನೋಡಿಕೊಂಡು ಮರಳಿ ಬರುತ್ತಿದ್ದಾಗ ಗಣೇಶ ತಂದೆ ಮಸ್ತಾನಪ್ಪ ಮದ್ದಲಿ, ವಿಶ್ವನಾಥ, ಶರಣಪ್ಪ, ಶಿವಾನಂದ ಎಂಬುವರ ಮೇಲೆ ಸುಮಾರು 28 ಜನ ಸೇರಿ ಕಟ್ಟಿಗೆ ಮತ್ತು ಬಡಿಗೆಯಿಂದ ಹಲ್ಲೆ ನಡೆಸಿ 'ಜಾತ್ರೆಗೆ ನೀವ್ಯಾಕೆ ಬಂದಿದ್ದೀರಿ' ಎಂದು ಜಾತಿ ನಿಂದನೆ ಮಾಡಿದ್ದಾರೆ ಎನ್ನಲಾಗಿದೆ. ಈ ಕುರಿತು ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.