ಗುಲ್ಬರ್ಗಾ

'ಈಡಿಗ ಸಮಾಜಕ್ಕೆ ಸೌಲಭ್ಯ ಒದಗಿಸಿ'

Published On :

ಕ.ಪ್ರ. ವಾರ್ತೆ, ಯಾದಗಿರಿ, ಜೂ.10
ಜಿಲ್ಲೆಯ ಆರ್ಯ ಈಡಿಗ ಸಮಾಜದವರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದು, ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಬೇಕೆಂದು ಆಗ್ರಹಿಸಿ ಜಿಲ್ಲಾಡಳಿತದ ಮೂಲಕ ಸೋಮವಾರ ಮುಖ್ಯಮಂತ್ರಿಗಳಿಗೆ ಸಮಾಜದ ಅನೇಕರು ಮನವಿ ಸಲ್ಲಿಸಿದರು.
ಸಂಘದ ಗೌರವಾಕ್ಷ ಶ್ರೀನಿವಾಸಗೌಡ ಕಟ್ಟಿಮನಿ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಜಿಲ್ಲೆಯಲ್ಲಿ ನಮ್ಮ ಜನಾಂಗದವರು 60 ಸಾವಿರಕ್ಕೂ ಹೆಚ್ಚು ಜನರಿದ್ದಾರೆ. ಕುಲ ಕಸುಬಾದ ಈಚಲು ಮರದ ಹೆಂಡ ತೆಗೆಯುವ ಕೆಲಸ ಮಾಡುತ್ತಾ ಬಂದಿದ್ದಾರೆ. ಆದರೆ ಸರ್ಕಾರ ಇದನ್ನು ನಿಲ್ಲಿಸಿದ್ದರಿಂದ ಸಮಾಜದವರು ಕೂಲಿ ಕೆಲಸ ಮಾಡಿ ಬದುಕುತ್ತಿದ್ದು, ಕೆಲವರು ಬೇರೆ ಕಡೆ ಗುಳೆ ಹೋಗಿದ್ದಾರೆ. ಅಲ್ಲದೇ ಜನಾಂಗದವರು ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ತಿಳಿಸಿದರು.
ಸರ್ಕಾರಿ ಸೌಲಭ್ಯ ಕಲ್ಪಿಸಿ: ಆರ್ಥಿಕವಾಗಿ ಹಿಂದುಳಿದ ನಮ್ಮ ಜನಾಂಗದವರಿಗೆ ಸೌಲಭ್ಯಗಳನ್ನು ಒದಗಿಸಿ ಸಾಮಾಜಿಕ ನ್ಯಾಯ ಒದಗಿಸಿ ಕೊಡಬೇಕು. ಈಡಿಗ ಜನಾಂಗದವರು ಕುಲಕಸುಬು ಇಲ್ಲದಂತಾಗಿದ್ದು, ಇದನ್ನು ಗಮನಿಸಿ ಸಮಾಜದವರಿಗೆ  ಸರ್ಕಾರದಿಂದ ಪಿಂಚಣಿ ಅಥವಾ ನಿರುದ್ಯೋಗ ಭತ್ಯೆ ನೀಡಬೇಕು. ಈಡಿಗ ಜನಾಂಗದ ನಿವೇಶನ ರಹಿತ, ವಸತಿ ರಹಿತರಿಗೆ ವಸತಿ ಯೋಜನೆಯಲ್ಲಿ ಸೌಲಭ್ಯ ಕಲ್ಪಿಸಬೇಕು. ಸಮಾಜದ ನಿರುದ್ಯೋಗಿ ಯುವಕರಿಗೆ ಹಾಗೂ ಮಹಿಳೆಯರಿಗೆ ನಿಗಮದಿಂದ ನೇರ ಸಾಲ ಮಂಜೂರು ಮಾಡಬೇಕು. ಉಚಿತ ಶಿಕ್ಷಣ ಕೊಡಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.
ಸಂಘದ ಸೈದಪ್ಪ ಗುತ್ತೇದಾರ, ಕುಮಾರಸ್ವಾಮಿ ಕಲಾಲ್, ಅಬ್ದುಲಾಯ ದೋರನಹಳ್ಳಿ, ಬಸಲಿಂಗಪ್ಪ ಹಳಿಗೇರಾ, ಮಲ್ಲಯ್ಯ ನಾಯ್ಕಲ್, ಶರಣಯ್ಯ ಕುಯಿಲೂರ, ತಿಮ್ಮರಡ್ಡಿ ಹಾಲಗೇರಾ, ಮಹೇಶ ಗುತ್ತೇದಾರ, ರಾಘವೇಂದ್ರ ಗುತ್ತೇದಾರ, ಹಣಮೇಶ ಗುತ್ತೇದಾರ, ಬಸಯ್ಯ ಬೆಳಗೇರಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.