ಜೂಜು ಅಡ್ಡೆ ಮೇಲೆ ದಾಳಿ, 7 ಜನರ ಬಂಧನ
ಗುರುಮಠಕಲ್: ಪಟ್ಟಣದ ಹೊರ ವಲಯಗಳಲ್ಲಿ ಜೂಜಾಟದಲ್ಲಿ ನಿರತರಾಗಿದ್ದವರ ಮೇಲೆ ಸೋಮವಾರ ಪೊಲೀಸರು ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ. ಅವರಿಂದ 6 ಸಾವಿರ ವಶಪಡಿಸಿಕೊಂಡಿದ್ದಾರೆ. ಪಟ್ಟಣದಲ್ಲಿ ಕಳೆದ ಕೆಲವು ತಿಂಗಳಿಂದ ಜೂಜು ವ್ಯಾಪಕವಾಗಿ ನಡೆಯುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಪಟ್ಟಣದ ಕಲಾಲವಾಡಿಯ ಮನೆಯೊಂದರ ಮೇಲೆ ದಾಳಿ ಮಾಡಿ ಜೂಜಾಟದಲ್ಲಿ ನಿರತರಾಗಿದ್ದ ಪ್ರಕಾಶ ವಾಳಾಪುರ, ಶಿವು ಮಠಪತಿ, ಸೈಯದ್ ಅಬ್ದುಲ್, ಅಮರನಾಥ ಕಲಾಲ, ಶರಣಪ್ಪ ಅಕ್ಕರಗಲ್, ಶ್ರೀನಿವಾಸ ಅಗ್ಸರ್, ದೇವೀಂದ್ರಪ್ಪ ಮಾದ್ವಾರ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ 6215 ವಶಕ್ಕೆ ಪಡೆದಿದ್ದು, ಗುರುಮಠಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುರುಮಠಕಲ್ ಪಿಎಸ್‌ಐ ಎಲ್.ಸಿ. ಕೋಲಕರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಬ್ಬಂದಿ ಸಂಗಪ್ಪ, ಸಿದ್ದವೀರಪ್ಪ, ಶಿವಪ್ಪ, ರೇಣುಕಾರಾಜ, ಮಂಜುನಾಥ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

