ಗುಲ್ಬರ್ಗಾ

ಬಸ್‌ಪಾಸ್ ವಿತರಣೆ ಆರಂಭ

Published On :

ಯಾದಗಿರಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಯಾದಗಿರಿ ವಿಭಾಗದಿಂದ 2013-14ನೇ ಸಾಲಿಗಾಗಿ ವಿದ್ಯಾರ್ಥಿಗಳ ಬಸ್‌ಪಾಸ್ ವಿತರಿಸುವ ಕಾರ್ಯ ಆರಂಭಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಕರ್ನಾಟಕ ನಾಗರಿಕ ಸೇವೆಗಳ ಖಾತರಿ ಯೋಜನೆಯನ್ನು ಸಕಾಲ ಯೋಜನೆಯಡಿ ಅನುಸೂಚಿತ ಸೇವೆಗಳು ಜಾರಿಯಲ್ಲಿದ್ದುದರಿಂದ ಶಾಲಾ-ಕಾಲೇಜುಗಳ ಮೂಲಕ ವಿದ್ಯಾರ್ಥಿಗಳ ಬಸ್‌ಪಾಸ್ ವಿತರಿಸುವ ವ್ಯವಸ್ಥೆಯನ್ನು ಸಕಾಲದಡಿ ಮಾಡಲಾಗಿರುತ್ತದೆ. ಅಲ್ಲದೇ ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಹಾಲಿ ಇರುವ ಕಿಮೀ ಮಿತಿಯನ್ನು 50ರಿಂದ 60 ಕಿಮೀ.ವರೆಗೆ ವಿಸ್ತರಿಸಲಾಗಿದೆ. ಸಿದ್ಧಪಡಿಸಿದ ಬಸ್‌ಪಾಸ್‌ಗಳನ್ನು ಆಯಾ ಶಾಲಾ, ಕಾಲೇಜುಗಳಿಗೆ ನೀಡಲಾಗುತ್ತದೆ. ನಿಗದಿತ ಬಸ್ ಪಾಸ್ ಹಣವನ್ನು ಸಂಗ್ರಹಿಸಿ ಆಯಾ ಶಾಲಾ, ಕಾಲೇಜಿನ ಮುಖ್ಯಸ್ಥರು ಬಸ್ ನಿಲ್ದಾಣಗಳಲ್ಲಿರುವ ಬಸ್ ಪಾಸ್ ವಿತರಣಾ ಕೌಂಟರ್‌ಗಳಿಗೆ ನೀಡಬೇಕು. ಬಸ್ ನಿಲ್ದಾಣಗಳಲ್ಲಿ ವಿದ್ಯಾರ್ಥಿ ಬಸ್‌ಪಾಸ್ ದರದ ಮಾಹಿತಿಯನ್ನು ಪ್ರಕಟಿಸಲಾಗಿದೆ.
7ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ 10 ತಿಂಗಳು ಉಚಿತ, ಹೈಸ್ಕೂಲ್ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ 670 ರು., ಹೈಸ್ಕೂಲ್ ವಿದ್ಯಾರ್ಥಿನಿಯರಿಗೆ 10 ತಿಂಗಳಿಗೆ 470 ರು., ಕಾಲೇಜು ವಿದ್ಯಾರ್ಥಿಗಳಿಗೆ 10 ತಿಂಗಳಿಗೆ 970 ರು., ಡಿಪ್ಲೊಮಾ, ಐಟಿಐ, ಜೆಒಸಿ ವಿದ್ಯಾರ್ಥಿಗಳಿಗೆ 12 ತಿಂಗಳಿಗೆ 1222 ರು., ವೃತ್ತಿಪರ ಕೋರ್ಸ್‌ಗಳಾದ ವೈದ್ಯಕೀಯ, ಎಂಜಿನಿಯರಿಂಗ್ ಇತರೇ ವಿದ್ಯಾರ್ಥಿಗಳಿಗೆ 10 ತಿಂಗಳಿಗೆ 1470 ರು., ಸಂಜೆ ಕಾಲೇಜು, ಪಿಎಚ್‌ಡಿ ವಿದ್ಯಾರ್ಥಿಗಳಿಗೆ 1470 ರು. ನಿಗದಿಪಡಿಸಲಾಗಿದೆ.  
ಪಾಸ್‌ಗಳನ್ನು ಪಡೆದುಕೊಳ್ಳಲು ಯಾದಗಿರಿ, ಗುರುಮಠಕಲ್, ಶಹಾಪುರ, ಸುರಪುರ, ಕೆಂಭಾವಿ, ಹುಣಸಗಿ, ಕೊಡೆಕಲ್, ನಾರಾಯಣಪುರ ಕೇಂದ್ರಗಳಲ್ಲಿ ಬಸ್‌ಪಾಸ್ ವಿತರಿಸುವ ಕೌಂಟರ್‌ಗಳನ್ನು ತೆರಯಲಾಗಿದೆ. ಈ ಸೌಲಭ್ಯಗಳನ್ನು ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳುವಂತೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ಎಸ್. ಸಂತೋಷಕುಮಾರ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.