ನಾಳೆ ಸಚಿವ ಇಸ್ಲಾಂ ಪ್ರವಾಸ
ಗುಲ್ಬರ್ಗ: ಪೌರಾಡಳಿತ, ಸಾರ್ವಜನಿಕ ಉದ್ಯಮಗಳು, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ ಮತ್ತು ಹಜ್ ಸಚಿವ ಖಮರುಲ್ ಇಸ್ಲಾಂ ಅವರು ಜೂ.14ರಂದು ಬೆ.8ಕ್ಕೆ ಉದ್ಯಾನ ಎಕ್ಸ್‌ಪ್ರೆಸ್ ರೈಲಿನ ಮೂಲಕ ಗುಲ್ಬರ್ಗಕ್ಕೆ ಆಗಮಿಸುವರು. ಅಂದು ಬೆ.10ಕ್ಕೆ ಸಾರ್ವಜನಿಕರ ಕುಂದುಕೊರತೆ ಆಲಿಸುವರು. 11ಕ್ಕೆ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು. 15ರಂದು ಬೆ.11ಕ್ಕೆ 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸಚಿವರು ಸಂಜೆ 4.30ಕ್ಕೆ ಹೈದ್ರಾಬಾದ್ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆಯೋಜಿಸಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು. 16ರಂದು ಬೆ.11ಕ್ಕೆ ವಿವಿಧ ಸಂಘ ಸಂಸ್ಥೆಗಳು ಏರ್ಪಡಿಸಿರುವ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು. 17ರಂದು ಬೆ.11ಕ್ಕೆ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ನಂತರ ಸಂಜೆ 4ಕ್ಕೆ ಸಾರ್ವಜನಿಕ ಕುಂದುಕೊರತೆ ವಿಚಾರಣೆ ನಡೆಸುವರು. 18ರ ಬೆ.11ಕ್ಕೆ ಎಚ್‌ಕೆಡಿಬಿ ಕಾನ್ಫರೆನ್ಸ್ ಹಾಲ್‌ನಲ್ಲಿ ಆಯೋಜಿಸಿರುವ ಎಂಎಸ್‌ಡಿಪಿ ಓರಿಯೆಂಟೇಶನ್ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 6.45ಕ್ಕೆ ಉದ್ಯಾನ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುವರು.
ಕಿರುಕುಳ: ಹಳ್ಳಕ್ಕೆ ಜಿಗಿದು ಮಹಿಳೆ ಆತ್ಮಹತ್ಯೆ
ಗುಲ್ಬರ್ಗ: ಗಂಡ ಮತ್ತು ಆತನ ಮನೆಯವರು ನೀಡುತ್ತಿದ್ದ ದೈಹಿಕ ಮತ್ತು ಮಾನಸಿಕ ಕಿರುಕುಳ ತಾಳದೆ ಗೃಹಿಣಿಯೊಬ್ಬಳು ಹಳ್ಳಕ್ಕೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಸ್ತಾಪುರ ಗ್ರಾಮದಲ್ಲಿ ನಡೆದಿದೆ. ಲಲಿತಾಬಾಯಿ ಗಂಡ ಸೂರ್ಯಕಾಂತ (28) ಎಂಬ ಗೃಹಿಣಿಯೇ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟೆ. ಮದುವೆಯಾಗಿ 10 ವರ್ಷಗಳಾಗಿದ್ದು, ಗಂಡ ಮತ್ತು ಆತನ ಮನೆಯವರು ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತು ಲಲಿತಾಬಾಯಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ಮಹಾಗಾಂವ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಲೆಗೆ ಯತ್ನ
ಗುಲ್ಬರ್ಗ: ಚಾಕುವಿನಿಂದ ಇರಿದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಘಟನೆ ಗುಲ್ಬರ್ಗ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ. ಶರಣಸಿರಸಗಿ ಮಡ್ಡಿಯ ಮಹೇಶ ಅಲಿಯಾಸ್ ರಾಕೇಶ ಎಂಬಾತನಿಗೆ ರಂಗನಾಥ ಎಂಬಾತ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾನೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

