ಪದವಿ ಕಾಲೇಜು ವಿಲೀನ: ಸರ್ಕಾರದ ನಿರ್ಧಾರಕ್ಕೆ ಎಐಡಿಎಸ್‌ಒ ಖಂಡನೆ
ಕ.ಪ್ರ. ವಾರ್ತೆ, ಯಾದಗಿರಿ, ಜೂ. 12
ಪದವಿ ಕೋರ್ಸ್‌ಗಳಾದ ಬಿಎ, ಬಿಎಸ್ಸಿ, ಬಿಬಿಎಂ, ಬಿಸಿಎ ಐಚ್ಛಿಕ ವಿಷಯಗಳಿಗೆ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೆ, ಆ ವಿದ್ಯಾರ್ಥಿಗಳನ್ನು ಬೇರೆ ಕಾಲೇಜಿಗೆ ವರ್ಗಾವಣೆ(ವಿಲೀನ) ಮಾಡುವ ಸರ್ಕಾರದ ನಿರ್ಧಾರವನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಖಂಡಿಸಿದೆ.
ಈ ನೀತಿಯು ಪದವಿ ಶಿಕ್ಷಣದ ಖಾಸಗೀಕರಣಕ್ಕೆ ರಹದಾರಿಯೆಂದು ಸಂಘಟನೆ ಅಭಿಪ್ರಾಯಪಟ್ಟಿದೆ. ಕೂಡಲೇ ಸರ್ಕಾರ ಈ ನಿರ್ಧಾರವನ್ನು ಹಿಂಪಡೆಯಬೇಕೆಂದು ಎಐಡಿಎಸ್‌ಒ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆ, ಶಿಕ್ಷಕರ ಹಾಗೂ ಮೂಲ ಸೌಲಭ್ಯಗಳ ಕೊರತೆಗೆ ಕಾರಣಗಳನ್ನು ಅರಿತು, ಪ್ರಜಾತಾಂತ್ರಿಕ ಚರ್ಚೆಗಳ ಮುಖಾಂತರ ಪರಿಹಾರವನ್ನು ಕಂಡುಕೊಳ್ಳಬೇಕು. ಅದನ್ನು ಮಾಡದೇ ಸರ್ಕಾರವು ಬೆರಳಿಗೆ ಗಾಯವಾಗಿದೆ ಎಂದು ಬೆರಳನ್ನೇ ಕತ್ತರಿಸಲು ಹೊರಟಿದೆ.
ಒಟ್ಟಿನಲ್ಲಿ ಇಂತಹ ನೀತಿಗಳಿಂದಾಗಿ ಅಂತಿಮವಾಗಿ ಶಿಕ್ಷಣವನ್ನು ಖಾಸಗೀಕರಣದೆಡೆಗೆ ಸಾಗಿಸುತ್ತಿರುವ ಸರ್ಕಾರದ ಹುನ್ನಾರವು ಎದ್ದು ಕಾಣುತ್ತದೆ. ಖಾಸಗೀಕರಣದ ಪರವಾದ ಈ ನೀತಿಯನ್ನು ಕೈಬಿಟ್ಟು ಎಲ್ಲಾ ರೀತಿಯ ಮೂಲ ಸೌಲಭ್ಯಗಳೊಂದಿಗೆ ಅವಶ್ಯವಿರುವಷ್ಟು ಸರ್ಕಾರಿ ಪದವಿ ಮಹಾವಿದ್ಯಾಲಯಗಳಿಗೆ ಅನುಮತಿ ಕೊಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಮಿತಿ ಜಿಲ್ಲಾ ಧ್ಯಕ್ಷೆ ಗೌರಮ್ಮ ಸಿ.ಕೆ. ಎಚ್ಚರಿಸಿದ್ದಾರೆ.
ಯರಗೋಳ ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ
ಯಾದಗಿರಿ: ತಾಲೂಕಿನ ಯರಗೋಳ ಗ್ರಾಮ ಪಂಚಾಯಿತಿ ಪಿಡಿಒ ಶಾಲೆಯ ವಿದ್ಯಾರ್ಥಿಗಳಿಗೆ ವಾಸಸ್ಥಳ ಪ್ರಮಾಣ ಪತ್ರ ನೀಡುತ್ತಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದ್ದು, ಕೂಡಲೇ ಸಂಬಂಧಪಟ್ಟ ಪಿಡಿಒ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಯರಗೋಳ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಯಂಕಾರಡ್ಡಿ ಮಾನೇಗಾರ ಒತ್ತಾಯಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ಈಗಾಗಲೇ ಶಾಲೆ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಬಸ್ ಪಾಸ್ ತುಂಬಾ ಅವಶ್ಯವಾಗಿದೆ. ಆದರೆ ಪಿಡಿಒ ವಿನಾಕಾರಣ ಮಕ್ಕಳ ಭವಿಷ್ಯದ ಜತೆ ಆಟವಾಡುತ್ತಿದ್ದು, ಪ್ರಮಾಣ ಪತ್ರ ನೀಡಲು ಸತಾಯಿಸುತ್ತಿದ್ದಾರೆ. ಆದ್ದರಿಂದ ಕೂಡಲೇ ಅವರ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

