ಗುಲ್ಬರ್ಗಾ

'ಶಿಕ್ಷಕರು ಆದರ್ಶ'

Published On :

ಸುರಪುರ: ಉತ್ತಮ ಸಮಾಜ ನಿರ್ಮಾಣದ ಕೆಲಸದಲ್ಲಿ ಶಿಕ್ಷಕರು ಆದರ್ಶರಾಗಿದ್ದಾರೆ ಎಂದು ರಂಗಂಪೇಟೆಯ ಡಾ.ಬಿ.ಆರ್. ಅಂಬೇಡ್ಕರ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ.ಎಲ್. ಚವ್ಹಾಣ ಹೇಳಿದರು. ಸಮೀಪದ ರಂಗಂಪೇಟೆಯ ಡಿಇಡಿ ಕಾಲೇಜಿನಲ್ಲಿ ಡಿಇಡಿ ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಶಿಕ್ಷಕರು ಯಾವಾಗಲು ಕ್ರಿಯಾಶೀಲರಾಗಿ ಕೆಲಸ ಮಾಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ರೂವಾರಿಗಳಾಗಬೇಕು ಎಂದರು. ಉಪನ್ಯಾಸಕ ತಿರುಪತಿ ನೀರಡಗಿ ಮಾತನಾಡಿ, ಶಿಕ್ಷಕರ ನೈತಿಕ ಮೌಲ್ಯ ಕುರಿತು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾಲೇಜಿನ ಪ್ರಾಂಶುಪಾಲ ಡಾ. ದಿಗಂಬರ ಬಾಬಾರೆ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ತಿಪ್ಪಣ್ಣ ದೊಡ್ಡಮನಿ, ವೆಂಕೋಬ ಅಂಗಡಿ, ವೀರಣ್ಣಗೌಡ ಹಳಿಮನಿ, ಭೀಮಶಪ್ಪ ತಡಿಬಿಡಿ, ಬಸವರಾಜ ಪಾಟೀಲ್ ಇದ್ದರು. ಸಾಮವ್ವ ಸ್ವಾಗತಿಸಿದರು. ವಿಶ್ವರಾಧ್ಯ ಕಾರ್ಯಕ್ರಮ ನಿರೂಪಿಸಿದರು. ಬಾಲಪ್ಪ ದೇವರಗೋನಾಲ ವಂದಿಸಿದರು.
ಗುಟ್ಕಾ ವಶ
ಶಹಾಪುರ: ಸರ್ಕಾರ ಗುಟ್ಕಾ ನಿಷೇಧ ಮಾಡಿದ್ದರೂ ತಾಲೂಕಿನಲ್ಲಿ ಕೆಲವು ಪಾನ್ ಶಾಪ್ ಸೇರಿದಂತೆ ಹೋಲ್‌ಸೇಲ್ ಅಂಗಡಿಗಳಲ್ಲಿ ಗುಟ್ಕಾ ಮಾರಾಟ ಅವ್ಯಾಹತವಾಗಿ ನಡೆದಿರುವ ಹಿನ್ನೆಲೆಯಲ್ಲಿ ತಹಸೀಲ್ದಾರ್ ಕೆ.ಎಲ್. ಭಜಂತ್ರಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿ ಗುಟ್ಕಾ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ.ಮುಖ್ಯಾಧಿಕಾರಿ ಸರೋಜಾ ಪಾಟೀಲ, ಆರೋಗ್ಯಾಧಿಕಾರಿ ಡಾ. ಛಾಯಾಗೋಳ್ ಮತ್ತು ಪಿಎಸ್‌ಐ ಸುನೀಲಕುಮಾರ ಮೂಲಿಮನಿ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿನ ಕೆಲ ಹೋಲ್ ಸೇಲ್ ಅಂಗಡಿಗಳ ಮೇಲೆ ದಾಳಿ ಮಾಡಿದಾಗ ಸಾವಿರಾರು ರು. ಮೌಲ್ಯದ ಗುಟ್ಕಾ ಪ್ಯಾಕ್‌ಗಳನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಯಿತು.ಈ ಸಂದರ್ಭದಲ್ಲಿ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ, ಸರ್ಕಾರದ ನಿಯಮಗಳನ್ನು ಪಾಲಿಸಬೇಕು. ಆರೋಗ್ಯಕ್ಕೆ ಮಾರಕವಾಗಿರುವ ಗುಟ್ಕಾ ನಿಷೇಧದ ಬಗ್ಗೆ ಈಗಾಗಲೇ ಜಾಗೃತಿ ಮೂಡಿಸುವ ಪ್ರಯತ್ನ ನಡೆದಿದ್ದು, ಇದನ್ನು ಅರಿತುಕೊಳ್ಳಬೇಕು. ಸದ್ಯ ಎಚ್ಚರಿಕೆ ನೀಡಲಾಗಿದೆ. ಮುಂದೆ ಕಾನೂನು ಕ್ರಮ ಎದುರಿಸಬೇಕಾಗುವುದು ಎಂದರು.  ನಂದಣ್ಣ ಪಾಟೀಲ,   ಲಕ್ಷ್ಮೀಶ, ನೈರ್ಮಲ್ಯ  ಸಲೀಂ, ಜಾಫರ ಸಾಬ್  ಇದ್ದರು.
'ಕಂಬ  ಬದಲಿಸಿ'
ಯಾದಗಿರಿ: ತಾಲೂಕಿನ ಅಬ್ಬೆತುಮಕೂರು ಗ್ರಾಮದಲ್ಲಿನ ಸರ್ಕಾರಿ ಶಾಲೆ ಪಕ್ಕದ ವಿದ್ಯುತ್ ಕಂಬ ಉರುಳಿ ಬೀಳುವ ಸ್ಥಿತಿಗೆ ತಲುಪಿದ್ದು, ಕೂಡಲೇ ಜೆಸ್ಕಾಂ ಅಧಿಕಾರಿಗಳು ಈ ಕಂಬವನ್ನು ತೆರವುಗೊಳಿಸಬೇಕು ಎಂದು ಜಿಪಂ ಸದಸ್ಯ ಬಸವರಾಜ ಖಂಡ್ರೆ ಆಗ್ರಹಿಸಿದ್ದಾರೆ. ಗ್ರಾಮದಲ್ಲಿನ ಬಹುತೇಕ ವಿದ್ಯುತ್ ಕಂಬಗಳು ಇದೇ ರೀತಿ ದುಸ್ಥಿತಿಗೆ ತಲುಪಿವೆ. ಈ ಬಗ್ಗೆ ಹಲವು ಬಾರಿ ಜೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ  ಅಪಾಯದ ಅಂಚಿನಲ್ಲಿರುವ ವಿದ್ಯುತ್ ಕಂಬವನ್ನು ಬದಲಿಸಿ ಹೊಸ ಕಂಬ ಅಳವಡಿಸಬೇಕೆಂದು ಜಿಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.