ಗುಲ್ಬರ್ಗಾ

ಸಂಚಾರಿ ನಿಯಮ ಪಾಲಿಸಲು ಸೂಚನೆ

Published On :

ಶಹಾಪುರ: ಪಟ್ಟಣದ ಪ್ರದೇಶದಲ್ಲಿ ಸಂಚರಿಸುವ ಆಟೋ ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ ಹೊಂದಿರಬೇಕು, ಸಮವಸ್ತ್ರ ಧರಿಸಬೇಕು, ಕಾನೂನು ಬಾಹಿರ ಕ್ರಮಗಳಿಂದ ದೂರವಿರಬೇಕು, ನಿಗದಿಪಡಿಸಿದಷ್ಟೇ ಪ್ರಯಾಣಿಕರನ್ನು ಕರೆತರಬೇಕು, ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಶಹಾಪುರ ಪಟ್ಟಣದ ಸಿಪಿಐ ಪವನನಂದಿ ಕರೆ ನೀಡಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಆಟೋ ಚಾಲಕರ ಹಾಗೂ ಮಾಲೀಕರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಅನಧಿಕೃತವಾಗಿ ಚಾಲನೆ ಮಾಡಿದರೆ ಕಾನೂನು ನಿಯಮದಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಪರವಾನಗಿ ಪಡೆಯದೇ ಆಟೋ ಓಡಿಸುವಂತಿಲ್ಲ. ಈ ನಿಟ್ಟಿನಲ್ಲಿ ಇಲಾಖೆ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿ ತರುತ್ತಿದ್ದು, ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಆದರೆ ಇದಕ್ಕೆ ಅವಕಾಶ ನೀಡದೇ ಚಾಲಕರು ಸಹಕರಿಸಬೇಕು ಎಂದು ತಿಳಿಸಿದರು. ಪಿಎಸ್‌ಐ ಸುನೀಲಕುಮಾರ ಮೂಲಿಮನಿ, ದೊಡಪ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.