ಗುಲ್ಬರ್ಗಾ

ಕಡಲ್ಕೊರೆತ: 30 ಕೋಟಿಗೆ ಪ್ರಸ್ತಾವ

Published On :

ಯಾದಗಿರಿ: ರಾಜ್ಯದ ಕರಾವಳಿ ಭಾಗದ ಅನೇಕ ಕಡೆಗಳಲ್ಲಿ ಕಡಲ್ಕೊರೆತ ಆರಂಭವಾಗಿದೆ. ಅಂಥ ಸ್ಥಳಗಳಲ್ಲಿ ತಡೆಗೋಡೆ ನಿರ್ಮಾಣ ಮಾಡಲು ತಕ್ಷಣ 30 ಕೋಟಿ ಅಗತ್ಯವಿದ್ದು, ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಬಾಬುರಾವ ಚಿಂಚನಸೂರ ತಿಳಿಸಿದರು.
ಈಗಾಗಲೇ ಮಳೆಗಾಲ ಆರಂಭವಾದ್ದರಿಂದ ಕರಾವಳಿ ಜಿಲ್ಲೆಗಳಲ್ಲಿ ಕಡಲ್ಕೊರೆತ ಶುರುವಾಗಿದೆ. ಇದಕ್ಕೆ ಶಾಶ್ವತ ಕಾಮಗಾರಿ ಕೈಗೊಳ್ಳುವ ಅಗತ್ಯವಿದೆ. ಆದರೆ ತುರ್ತಾಗಿ ತಡೆಗೋಡೆ ನಿರ್ಮಿಸಿ ಕಡಲು ಕೊರೆತ ತಡೆಯಲು ಕ್ರಮ ಕೈಗೊಳ್ಳಲಾಗುವುದು. ಆ ಭಾಗದ ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿದ್ದು, 30 ಕೋಟಿ ಅನುದಾನ ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಲ್ಲದೇ ಬಂದರು ಹೂಳೆತ್ತುವ ಕಾಮಗಾರಿಯನ್ನೂ ಶೀಘ್ರದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.