10 ಸಾವಿರ ಕೋಟಿ ಬಂಡವಾಳದಲ್ಲಿ ಜವಳಿ ಪಾರ್ಕ್: ಸಚಿವ
ಯಾದಗಿರಿ: ಇಲ್ಲಿಗೆ ಸಮೀಪದ ಕಡೇಚೂರು ಗ್ರಾಮದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ ಸುಮಾರು 10 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿ ಅಂತಾರಾಷ್ಟ್ರೀಯ ಮಟ್ಟದ ಜವಳಿ ಪಾರ್ಕ್ ಪ್ರಾರಂಭಿಸಲು ಚಿಂಚನೆ ನಡೆಸಲಾಗಿದೆ ಎಂದು ಜವಳಿ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತಾಲೂಕಿನ ಕಡೇಚೂರು ಹಾಗೂ ಬಾಡಿಯಾಳ ಗ್ರಾಮಗಳಲ್ಲಿ 3300 ಎಕರೆ ಜಮೀನನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿದೆ. ಅಲ್ಲಿ ವಿವಿಧ ಕೈಗಾರಿಕೆಗಳನ್ನು ಸ್ಥಾಪಿಸಲು ಹೂಡಿಕೆದಾರರು ಮುಂದೆ ಬರುತ್ತಿದ್ದಾರೆ. 10 ಸಾವಿರ ಕೋಟಿ ಬಂಡವಾಳದಲ್ಲಿ ಜವಳಿ ಪಾರ್ಕ್ ಸ್ಥಾಪಿಸಲು ಚಿಂತನೆ ನಡೆಸಲಾಗಿದೆ. ಈ ಕುರಿತು ಈಗಾಗಲೇ ಹಿರಿಯ ಅಧಿಕಾರಿಗಳ ಜತೆ ಎರಡು ಬಾರಿ ಚರ್ಚಿಸಲಾಗಿದ್ದು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಲಾಗಿದೆ. ಇದರಿಂದ ಈ ಭಾಗದ ಆರೇಳು ಸಾವಿರ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ ಎಂದು ಹೇಳಿದರು.
ಇದೇ ಪ್ರದೇಶದಲ್ಲಿ ಉಣ್ಣೆ ಮಿಲ್ ಪ್ರಾರಂಭಿಸುವ ಕುರಿತಂತೆಯೂ ಚರ್ಚೆ ನಡೆಸಲಾಗಿದೆ. 100 ಎಕರೆ ಪ್ರದೇಶದಲ್ಲಿ ಸುಮಾರು 200 ಕೋಟಿ ಬಂಡವಾಳದಲ್ಲಿ ಉಣ್ಣೆ ಮಿಲ್ ಸ್ಥಾಪಿಸಲಾಗುವುದು. ರಾಜ್ಯದಲ್ಲಿ 1 ಕೋಟಿಗೂ ಹೆಚ್ಚು ಕುರಿಗಳಿದ್ದು, ಈವರೆಗೆ ಅವುಗಳ ಕೂದಲು ನಿಷ್ಪ್ರಯೋಜನವಾಗಿತ್ತು. ಮಿಲ್ ಸ್ಥಾಪನೆಯಿಂದ ರಾಜ್ಯದ ರೈತರಿಗೆ ಆರ್ಥಿಕವಾಗಿ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

