ಇಂದು ಬಂದಳ್ಳಿ ಬಳಿ ಬ್ಯಾರೇಜ್ ಉದ್ಘಾಟನೆ
ಯಾದಗಿರಿ: ಸಣ್ಣ ನೀರಾವರಿ ಇಲಾಖೆ ಯ ಎಐಬಿಪಿ ಯೋಜನೆಯಡಿಯಲ್ಲಿ ತಾಲೂಕಿನ ಬಂದಳ್ಳಿ ಗ್ರಾಮದ ಬಳಿ ನಿರ್ಮಿಸಿರುವ ಬ್ಯಾರೇಜ್ ಉದ್ಫಾಟನೆ ಸಮಾರಂಭ ಜೂ.16ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಜವಳಿ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ಅವರು ಉದ್ಫಾಟಿಸುವರು. ಅತಿಥಿಗಳಾಗಿ ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಹಾಗೂ ಸಣ್ಣ ನೀರಾವರಿ ಸಚಿವ ಶಿವರಾಜ ತಂಗಡಗಿ ಭಾಗವಹಿಸುವರು. ಜಿಪಂ ಅಧ್ಯಕ್ಷೆ ಮರೆಮ್ಮ ಶ್ಯಾಣ್ಯಾನೋರ, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ, ವಿಧಾನ ಪರಿಷತ್ ಸದಸ್ಯ ಅಲ್ಲಂಪ್ರಭು ಪಾಟೀಲ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಲಾಗಿದೆ.
ದೋರನಹಳ್ಳಿಯಲ್ಲಿ ಸಚಿವರಿಗೆ ಸನ್ಮಾನ
ಶಹಾಪುರ: ಜವಳಿ, ಬಂದರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ಅವರು ಪ್ರಥಮ ಬಾರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ತಾಲೂಕಿನ ದೋರನಹಳ್ಳಿಯಲ್ಲಿ ಅವರನ್ನು ಸನ್ಮಾನಿಸಲಾಯಿತು. ದೋರನಹಳ್ಳಿಯ ನಿಜಶರಣ ಅಂಬಿಗರ ಚೌಡಯ್ಯನವರ ವೃತ್ತದಲ್ಲಿ ನೂತನ ಸಚಿವರಿಗೆ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಸಂತಸ ಹಂಚಿಕೊಂಡ ಚಿಂಚನಸೂರ, ದೋರನಹಳ್ಳಿ ಗ್ರಾಮಸ್ಥರು ನೀಡಿದ ಸತ್ಕಾರ ಸ್ವೀಕರಿಸಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು. ಗ್ರಾಮದ ಸೌಕರ್ಯಕ್ಕೆ ಹೆಚ್ಚಿನ ಗಮನ ನೀಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಶಂಕ್ರಣ್ಣ ಶಾಣ್ಯಾನೋರ್, ಭೀಮಾಶಂಕರ ಅಣಬಿ, ಹೈಯಾಳಪ್ಪ ಗುಂಟ್ನೂರ, ಮಲ್ಲಿಕಾರ್ಜುನ ಸಗರ, ಹಳ್ಳೆಪ್ಪ ಹುಡೇದ, ಹಣಮಂತ ಚಪಾಟ್ಲಿ, ಮಹಾದೇವಪ್ಪ ಹುಡೇದ, ಹೈಯಾಳಪ್ಪ ದೊಡ್ಮನಿ, ರಂಗಪ್ಪಗುಂಡಳ್ಳಿ, ಬಾಲರಾಜ ದೇವದುರ್ಗ, ಬಸವರಾಜ, ಮಹಿಮೂದಅಲಿ ಇತರರು ಇದ್ದರು.
ಬಾಲ ಕಾರ್ಮಿಕರ
ರಕ್ಷಣೆಗೆ ಒತ್ತಾಯ
ಯಾದಗಿರಿ: ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿ ಇನ್ನೂ ವ್ಯಾಪಕವಾಗಿದ್ದು, ಅವರನ್ನು ರಕ್ಷಿಸಿ ಶೈಕ್ಷಣಿಕ ಮುಖ್ಯವಾಹಿನಿಗೆ ಸೇರಿಸುವ ಕೆಲಸ ಮಾಡಬೇಕೆಂದು ಕಟ್ಟಡ ಕಟ್ಟುವ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಸೈದಪ್ಪ ಗುತ್ತೇದಾರ ಆಗ್ರಹಿಸಿದ್ದಾರೆ. ನಗರ, ಗ್ರಾಮೀಣ ಪ್ರದೇಶದಲ್ಲಿ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಿದೆ. ವಸತಿ ಶಾಲೆಗಳು ಮುಚ್ಚಿರುವುದೇ ಇದಕ್ಕೆ ಕಾರಣ. ಆದ್ದರಿಂದ ಸಾವಿರಾರು ಬಾಲ ಕಾರ್ಮಿಕರನ್ನು ಹೋಟೆಲ್, ಗ್ಯಾರೇಜ್, ಬಟ್ಟೆ ಅಂಗಡಿ, ಮನೆಗೆಲಸ, ಸಣ್ಣ ಕೈಗಾರಿಕೆ ಸೇರಿದಂತೆ ಉದ್ಯಮಗಳಲ್ಲಿ ದುಡಿಸಿಕೊಳ್ಳಲಾಗುತ್ತಿದೆ. ಈ ಬಗ್ಗೆ ಗೊತ್ತಿದ್ದೂ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾಡಳಿತ ನಿರ್ಲಕ್ಷ್ಯ ವಹಿಸುತ್ತಿದೆ. ಆದ್ದರಿಂದ ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆಯವರು ಬಾಲ ಕಾರ್ಮಿಕರನ್ನು ಪತ್ತೆ ಹಚ್ಚಿ ಅವರನ್ನು ಶೈಕ್ಷಣಿಕ ಮುಖ್ಯವಾಹಿನಿಗೆ ಸೇರಿಸಬೇಕು. ಜಿಲ್ಲೆಯನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕೆಂದು ಸೈದಪ್ಪ ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

