ಗುಲ್ಬರ್ಗಾ

ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಮನವಿ

Published On :

ಕನ್ನಡಪ್ರಭ ವಾರ್ತೆ, ಯಾದಗಿರಿ, ಜೂ.15
ಶಹಾಪುರ ತಾಲೂಕಿನ ವಡಗೇರಾ, ತುಮಕೂರ ಮುಖ್ಯರಸ್ತೆಯನ್ನು ಅಗಲೀಕರಣ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ಅವರಿಗೆ ಕರವೇ ಕಾರ್ಯಕರ್ತರು ಮನವಿ ಸಲ್ಲಿಸಿದರು.
  ನಗರದ ಪ್ರವಾಸಿ ಮಂದಿರದಲ್ಲಿ ಕರವೇ ಜಿಲ್ಲಾಧ್ಯಕ್ಷ ಟಿ.ಎನ್. ಭೀಮುನಾಯಕ, ವಡಗೇರಾ ಹೋಬಳಿ ಅಧ್ಯಕ್ಷ ಶಿವುಕುಮಾರ ಕೊಂಕಲ್ ನೇತೃತ್ವದಲ್ಲಿ ಕಾರ್ಯಕರ್ತರು ಮನವಿ ಸಲ್ಲಿಸಿದರು. ಈಗಾಗಲೇ ತಾಲೂಕು ಕೇಂದ್ರವೆಂದು ಘೋಷಣೆಯಾಗಿರುವ ವಡಗೇರಾ ಸುತ್ತಲಿನ ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು, ಇಲ್ಲಿ ಹಲವಾರು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ಈ ಗ್ರಾಮದ ಅಕ್ಕ ಪಕ್ಕದಲ್ಲಿರುವ ಕೃಷ್ಣಾ ಹಾಗೂ ಭೀಮಾ ನದಿಗಳಿಗೆ ಸೇತುವೆಗಳು ನಿರ್ಮಾಣವಾಗಿದ್ದು, ಈ ಸೇತುವೆಯ ಮುಖಾಂತರ ಪಕ್ಕದ ರಾಜ್ಯವಾದ ಆಂಧ್ರ, ಪಕ್ಕದ ಜಿಲ್ಲೆಯಾದ ರಾಯಚೂರಿಗೆ ಹಾಗೂ ತುಮಕೂರಿನಲ್ಲಿರುವ ಸಕ್ಕರೆ ಕಾರ್ಖಾನೆಗೆ ನಿತ್ಯವೂ ನೂರಾರು ವಾಹನಗಳು ಸಂಚರಿಸುತ್ತವೆ. ಆದರೆ ರಸ್ತೆ ಕಿರಿದಾಗಿರುವುದರಿಂದ ವಾಹನ ಸಂಚಾರಕ್ಕೆ ಹಾಗೂ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಇದನ್ನು ಮನಗಂಡ ಜಿಲ್ಲಾ ಆಡಳಿತವು ಕಳೆದ ವರ್ಷ ರಸ್ತೆ ಅಗಲೀಕರಣ ಮಾಡಲು ಮುಂದಾಗಿ ಸಂಬಂಧಪಟ್ಟವರಿಗೆಗೆ ನೋಟಿಸ್ ಜಾರಿ ಮಾಡಿತ್ತು.
ಕ್ರಮಕ್ಕೆ ಆದೇಶಿಸಲು ಒತ್ತಾಯ: ಆದರೆ ಈಗ ರಸ್ತೆ ಅಗಲೀಕರಣದ ಬಗ್ಗೆ ಇಲಾಖೆಯವರು ಮೌನ ವಹಿಸಿರುವುದರಿಂದ ವಾಹನ ಸವಾರರು ಸಂಚರಿಸಲು ಹಾಗೂ ಸಾರ್ವಜನಿಕರು ತಿರುಗಾಡಲು ಬಹಳ ಕಷ್ಟವನ್ನು ಅನುಭವಿಸುತ್ತಿದ್ದಾರೆ. ಕಾರಣ ಸಂಬಂಧಪಟ್ಟ ಇಲಾಖೆಯವರಿಗೆ ರಸ್ತೆ ಅಗಲೀಕರಣ ಮಾಡಲು ಆದೇಶ ನೀಡಬೇಕೆಂದು ಅವರು ಆಗ್ರಹಿಸಿದರು.
ಸಚಿವರ ಸ್ಪಂದನೆ: ಮನವಿ ಸ್ವೀಕರಿಸಿದ ಸಚಿವರು, ಶೀಘ್ರದಲ್ಲಿಯೇ ರಸ್ತೆ ಅಗಲೀಕರಣದ ಮಾಡಲು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗುವುದೆಂದು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಬಾಬುರಾವ ಚಿಂಚನಸೂರ ಅವರಿಗೆ ಕರವೇ ಜಿಲ್ಲಾ ಘಟಕದ ಅದ್ಯಕ್ಷ ಬೀಮುನಾಯಕ ಸನ್ಮಾನಿಸಿದರು. ಕರಬಸ್ಸಪ್ಪ ಬಿರಾಳ, ಅರ್ಜುನ ಪವಾರ, ಅಬ್ದುಲ್ ಖತಾಲಿ, ಅಜ್ಮೀರ ಬಾಷಾ, ನೂರಬಾಯಿ ಅಬ್ದುಲ್ ಚಿಗಾನೂರ, ರಫೀ ದೇವದುರ್ಗ, ನಿಂಗಪ್ಪ ಗುಡುಗುಡಿ, ವೆಂಕಟೇಶ ರಾಠೋಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.