ಗುಲ್ಬರ್ಗಾ

ವರ್ಗಾವಣೆಗೆ ವಿರೋಧ; ಮೊರಾರ್ಜಿ ಶಾಲಾ ಶಿಕ್ಷಕರ ಧರಣಿ

Published On :

ಕ.ಪ್ರ.ವಾರ್ತೆ  ಯಾದಗಿರಿ  ಜೂ.17
ತಮ್ಮನ್ನು ವರ್ಗಾವಣೆ ಮಾಡಿರುವ ಕ್ರಮವನ್ನು ಖಂಡಿಸಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಚೇರಿ ಎದುರು ಗುತ್ತಿಗೆ ಆಧಾರದಲ್ಲಿ ಮೊರಾರ್ಜಿ ವಸತಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಶಿಕ್ಷಕರು ಸೋಮವಾರ ಪ್ರತಿಭಟನೆ ನಡೆಸಿದರು.
  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ರಾಜ್ಯಾಧ್ಯಕ್ಷ ಜಟ್ಟೆಪ್ಪ ಮಾತನಾಡಿ, ಮೊರಾರ್ಜಿ, ಕಿತ್ತೂರು ರಾಣಿ ವಸತಿ ಶಾಲೆಗಳಲ್ಲಿ ಉಚ್ಚ ನ್ಯಾಯಾಲಯ ಆದೇಶ ಮೇರೆಗೆ ಮುಂದುವರೆದ ಶಿಕ್ಷಕರು ಹಾಗೂ ಪ್ರಾಂಶುಪಾಲರು ಕಡಿಮೆ ವೇತನ ತೆಗೆದುಕೊಂಡು ವಿಳಂಬವಾಗಿ ಸಂಬಳ ಪಡೆದು ಕಾರ್ಯನಿರ್ವಹಿಸುತ್ತಿದ್ದಾರೆ. ಬಡತನದ ಬವಣೆಯನ್ನು ಹೊತ್ತುಕೊಂಡು ಕಡಿಮೆ ಸಂಬಳ ತೆಗೆದುಕೊಂಡು ಕಾಯಂ ಸಿಬ್ಬಂದಿಯೊಂದಿಗೆ ಅದೇ ಶಾಲಾವಧಿಯಂತೆ ಕರ್ತವ್ಯ ನಿರ್ವಹಿಸುತ್ತಿದ್ದರೂ ಅವರನ್ನು ವರ್ಗಾವಣೆ ಮಾಡಿ ಮಾನಸಿಕವಾಗಿ ತೊಂದರೆಗೊಳಗಾಗುವಂತೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
  ಕೋರ್ಟ್ ಆದೇಶದ ಮೇರೆಗೆ ಅದೇ ಶಾಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಮುಂದುವರೆದ ಶಿಕ್ಷಕರು ಮತ್ತು ಪ್ರಾಂಶುಪಾಲರ ವರ್ಗಾವಣೆ ಮಾಡದೆ ಶಾಲೆಗಳಲ್ಲಿ ಯಥಾಸ್ಥಿತಿ ಹುದ್ದೆ ಮುಂದುವರೆಸಿಕೊಂಡು ಹೋಗುವಂತೆ ನೋಡಿಕೊಳ್ಳಬೇಕೆಂಬ ಮನವಿಯನ್ನು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗೆ ಸಲ್ಲಿಸಿದರು.
  ಈಗಾಗಲೇ ಸಿಇಟಿ ಮೂಲಕ ನೇಮಕಾತಿ ಹೊಂದಿದ ಹೆಚ್ಚಿನ ಸಂಬಳ ತೆಗೆದುಕೊಳ್ಳುವ ಶಿಕ್ಷಕರನ್ನು ಯಾವುದೇ ಶಾಲೆಗೆ ವರ್ಗಾವಣೆ ಮಾಡಿದರೂ ಸಮಸ್ಯೆಯಾಗುವುದಿಲ್ಲ. ನ್ಯಾಯಲಯದ ಆದೇಶದ ಮೇರೆಗೆ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ವರ್ಗಾವಣೆ ಮಾಡಿದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
  ಪ್ರತಿಭಟನೆಯಲ್ಲಿ ಪಧಾಧಿಕಾರಿಗಳಾದ ಸಂಗನಗೌಡ ಧನರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.